Advertisement

ಬೆಂಗಳೂರಲ್ಲಿ ಲೈಂಗಿಕ ದೌರ್ಜನ್ಯ ಮಿತಿಮೀರಿದೆ;ರಾಜನಾಥ್ ಗೆ BJP ದೂರು

03:23 PM Jan 05, 2017 | Team Udayavani |

ಬೆಂಗಳೂರು:ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ಸಂದರ್ಭದಲ್ಲಿ ನಡೆದ ಲೈಂಗಿಕ ಕಿರುಕುಳ ಪ್ರಕರಣ ಇದೀಗ ರಾಜಕೀಯ ಸಮರಕ್ಕೆ ವೇದಿಕೆಯಾಗಿದೆ. ಆ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ ಹೆಚ್ಚಳವಾಗುತ್ತಿದೆ ಎಂದು ಕೇಂದ್ರ ಗೃಹ ಸಚಿವರಿಗೆ ದೂರು ನೀಡಲು ಬಿಜೆಪಿ ನಿರ್ಧರಿಸಿದೆ ಎಂದು ವರದಿ ಹೇಳಿದೆ.

Advertisement

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ದಿನೇ, ದಿನೇ ಲೈಂಗಿಕ ಕಿರುಕುಳ ಪ್ರಕರಣ ಹೆಚ್ಚಳವಾಗುತ್ತಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ನಿಯೋಗ ದೂರು ನೀಡಲು ಮುಂದಾಗಿದೆ ಎಂದು ವರದಿ ವಿವರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next