Advertisement

ರಜೌರಿ: IED ನಿಷ್ಕ್ರಿಯ, ತಪ್ಪಿದ ದುರಂತ

07:25 PM Sep 03, 2023 | Team Udayavani |

ರಜೌರಿ/ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ರಜೌರಿಯ ಗ್ರಾಮ ವ್ಯಾಪ್ತಿಯಲ್ಲಿ ಇರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಹುದುಗಿಸಿ ಇರಿಸಲಾಗಿದ್ದ ಭಾರೀ ಪ್ರಮಾಣದ ಸುಧಾರಿತ ಸ್ಫೋಟಕಗಳನ್ನು ಪತ್ತೆ ಮಾಡಲಾಗಿದೆ. ಈ ಮೂಲಕ ಸಂಭವಿಸಬಹುದಾಗಿದ್ದ ಭಾರೀ ದುರಂತವನ್ನು ತಪ್ಪಿಸಲಾಗಿದೆ.

Advertisement

ಜಮ್ಮು-ಪೂಂಛ್‌ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಂಡಿ ತೆಗೆದು ಬುತ್ತಿಯಲ್ಲಿ ಅಪಾರ ಪ್ರಮಾಣದ ಸ್ಫೋಟಕ ಇರಿಸಲಾಗಿದೆ. ಸುದ್ದಿ ತಿಳಿದ ಕೂಡಲೇ ಭೂಸೇನೆಯ ಹಿರಿಯ ಅಧಿಕಾರಿಗಳು ಬಾಂಬ್‌ ನಿಷ್ಕ್ರಿಯ ದಳದ ಜತೆಗೆ ಸ್ಥಳಕ್ಕೆ ಧಾವಿಸಿದ್ದಾರೆ. ಪೊಲೀಸರಿಗೆ ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ. ಮೂರು ಗಂಟೆಗಳ ಕಾಲ ರಸ್ತೆ ಸಂಚಾರಕ್ಕೆ ತಡೆಯೊಡ್ಡಿ ಸ್ಫೋಟಕಗಳನ್ನು ನಿಷ್ಕ್ರಿಯಗೊಳಿಸಲಾಯಿತು. ಪೊಲೀಸರು ಕೇಸು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next