Advertisement

ತಳ ಮಟ್ಟದಿಂದ ಪಕ್ಷ ಸಂಘಟಿಸಲು ರಾಜುಗೌಡ ಕರೆ

06:31 PM Mar 10, 2021 | Nagendra Trasi |

ಹೂವಿನಹಿಪ್ಪರಗಿ: ಬಿಜೆಪಿ ಅಧಿ ಕಾರಕ್ಕೆ ಬರುವ ಮೊದಲು ಎಚ್‌.ಡಿ. ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರಕಾರ ಅಧಿ ಕಾರದಲ್ಲಿದ್ದಾಗ ಜಾರಿಗೆ ತಂದ ಜನಪರ ಯೋಜನೆಗಳನ್ನು ಪ್ರತಿಯೊಬ್ಬರ ಮನೆ ಬಾಗಿಲಿಗೆ ಮುಟ್ಟಸಿ ತಳಮಟ್ಟದಿಂದ ಪಕ್ಷ ಸಂಘಟನೆ ಮಾಡಬೇಕು ಎಂದು ಜೆಡಿಎಸ್‌ ಮುಖಂಡ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಕಾರ್ಯಕರ್ತರಿಗೆ ಕರೆ ನೀಡಿದರು.

Advertisement

ಬಸವನಬಾಗೇವಾಡಿ ತಾಲೂಕಿನ ಕುದರಿಸಾಲವಾಡಗಿ ಗ್ರಾಮದ ಮಹಾದೇಶ್ವರ ಮಠದ ಸಭಾ ಭವನದಲ್ಲಿ ಮಂಗಳವಾರ ನಡೆದ ದೇವರಹಿಪ್ಪರಗಿ ಮತಕ್ಷೇತ್ರದ
ಬಸವನಬಾಗೇವಾಡಿ ತಾಲೂಕಿಗೆ ಸಂಬಂಧಿಸಿದ ಗ್ರಾಮಗಳ ಜೆಡಿಎಸ್‌ ಪದಾಧಿಕಾರಿಗಳ ನೇಮಕ ಮಾಡುವ ಪೂರ್ವಭಾವಿ ಸಭೆಯಲ್ಲಿ ಅವರು
ಮಾತನಾಡಿದರು.

ಕಳೆದ ಗ್ರಾಮ ಪಂಚಾಯತ್‌ ಚುನಾವಣೆಯಲ್ಲಿ ದೇವರಹಿಪ್ಪರಗಿ ಮತಕ್ಷೇತ್ರದ 605 ಗ್ರಾಪಂ ಸದಸ್ಯರ ಪೈಕಿ 250ಕ್ಕಿಂತಲೂ ಹೆಚ್ಚು ಜೆಡಿಎಸ್‌ ಬೆಂಬಲಿತ
ಅಭ್ಯರ್ಥಿಗಳು ಚುನಾಯಿತರಾಗಿದ್ದಾರೆ. ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷದ ದುರಾಡಳಿತ ಕಂಡಿರುವ ಜನ ಗ್ರಾಪಂ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಒತ್ತು ಕೊಟ್ಟು ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿ. ಮುಂಬರುವ ತಾಲೂಕು ಮತ್ತು ಜಿಲ್ಲಾ ಪಂಚಾಯತ್‌ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪಕ್ಷದ ಪದಾಧಿಕಾರಿಗಳನ್ನು ನೇಮಕ ಮಾಡಲಾಗುತ್ತದೆ ಎಂದು ಹೇಳಿದರು.

ದೇವರಹಿಪ್ಪರಗಿ ಮತಕ್ಷೇತ್ರದ ಜೆಡಿಎಸ್‌ ಅಧ್ಯಕ್ಷ ಸಾಯಬಣ್ಣ ಬಾಗೇವಾಡಿ ಮಾತನಾಡಿ, ಕಳೆದ ಹಲವು ದಿನಗಳಿಂದ ನಮ್ಮ ಪಕ್ಷ ಸಂಘಟನೆಯನ್ನು ಕಂಡು ವಿವಿಧ ಪಕ್ಷವನ್ನು ತೊರೆದು ಜೆಡಿಎಸ್‌ ಪಕ್ಷಕ್ಕೆ ನೂರಾರು ಯುವ ಕಾರ್ಯಕರ್ತರು ಸೇರಿ ಹಿರಿಯರು ಸೇರ್ಪಡೆಗೊಳ್ಳುತ್ತಿರುವುದು ಶುಭ ಸಂಕೇತ ಎಂದರು. ಈ ವೇಳೆ ಬಸವನಬಾಗೇವಾಡಿ ತಾಲೂಕಿನ ಕರವೇ (ಪ್ರವೀಣ ಶೆಟ್ಟಿ) ಬಣದ ತಾಲೂಕಾಧ್ಯಕ್ಷ ಮಹಾಂತೇಶ ಚಕ್ರವರ್ತಿ ಹಾಗೂ ಅವರ ಬೆಂಬಲಿಗರು ಬಿಜೆಪಿ ತೊರೆದು ರಾಜುಗೌಡ ಪಾಟೀಲ ನೇತೃತ್ವದಲ್ಲಿ ಪಕ್ಷದ ಶಾಲು ಹಾಕಿಕೊಂಡು ಜೆಡಿಎಸ್‌ಗೆ ಸೇರ್ಪಡೆಯಾದರು.

ಗುರನಗೌಡ ಪಾಟೀಲ, ಸಂಗನಗೌಡ ಪಾಟೀಲ, ಪಿಕೆಪಿಎಸ್‌ ಅಧ್ಯಕ್ಷ ಅನಿಲಗೌಡ ಪಾಟೀಲ, ಅಣ್ಣಪ್ಪ ಆಲೂರ, ಅಯ್ಯನಗೌಡ ಪಾಟೀಲ, ಬಸವರಾಜ
ಡೆಂಗಿ, ಹೂವಿನಹಿಪ್ಪರಗಿ ಜೆಡಿಎಸ್‌ ಬ್ಲಾಕ್‌ ಅಧ್ಯಕ್ಷ ಬಸನಗೌಡ ಬಿರಾದಾರ, ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ಸಿದ್ದನಗೌಡ ಪಾಟೀಲ, ಬಸಣ್ಣ ಬಾಗೇವಾಡಿ, ಗುರುಸ್ವಾಮಿ ಹಿರೇಮಠ ಸೇರಿದಂತೆ ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next