Advertisement

ಈ ಲವ್‌ ಬೇಕಿತ್ತಾ!: ರಾಜು ಜೇಮ್ಸ್‌ ಬಾಂಡ್‌ ಸಾಂಗ್‌ ರಿಲೀಸ್‌

03:26 PM Jun 12, 2023 | Team Udayavani |

“ರಾಜು ಜೇಮ್ಸ್‌ ಬಾಂಡ್‌’ ಚಿತ್ರದ “ಬೇಕಿತ್ತಾ ಬೇಕಿತ್ತಾ, ಈ ಲವು ಬೇಕಿತ್ತಾ ಎಂಬ ಹಾಡಿನ ಲಿರಿಕಲ್‌ ವಿಡಿಯೋ ಬಿಡುಗಡೆಯಾಗಿದೆ.

Advertisement

ಅಂತೋನಿ ದಾಸ್‌ ಹಾಡಿರುವ ಈ ಹಾಡಿಗೆ ಅನೂಪ್‌ ಸೀಳಿನ್‌ ಸಂಗೀತ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಶೇಷ ಅಧಿಕಾರಿ ವೆಂಕಟೇಶ್‌ ಹಾಡನ್ನು ಬಿಡುಗಡೆ ಮಾಡಿದ್ದಾರೆ. ದೀಪಕ್‌ ಮಧುವನಹಳ್ಳಿ ಈ ಸಿನಿಮಾದ ನಿರ್ದೇಶಕರು. ಚಿತ್ರದ ಬಗ್ಗೆ ಮಾತನಾಡುವ ದೀಪಕ್‌, “ರಾಜು ಜೇಮ್ಸ್ ಬಾಂಡ್‌ ನನ್ನ ನಿರ್ದೇಶನದ ಮೂರನೇ ಚಿತ್ರ. ‌ಈ ಚಿತ್ರ ವಿಭಿನ್ನ ಕಥಾಹಂದರ ಹೊಂದಿದೆ. ಚಿತ್ರೀಕರಣ ಮುಕ್ತಾಯವಾಗಿದೆ. ಆಗಸ್ಟ್‌ ನಲ್ಲಿ ತೆರೆಗೆ ತರುವ ಪ್ರಯತ್ನ ಮಾಡುತ್ತಿದ್ದೇವೆ. ಮಂಜುನಾಥ್‌ ವಿಶ್ವಕರ್ಮ ಹಾಗೂ ಕಿರಣ್‌ ಬರ್ತೂರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಲಂಡನ್‌ ನಲ್ಲಿ 21 ದಿನಗಳ ಚಿತ್ರೀಕರಣವಾಗಿದೆ’ ಎಂದರು.

ಗುರುನಂದನ್‌ ಈ ಚಿತ್ರದ ನಾಯಕ. ಚಿತ್ರದ ಬಗ್ಗೆ ಮಾತನಾಡುವ ಗುರುನಂದನ್‌, “ನಿರ್ದೇಶಕ ದೀಪಕ್‌ ಮಧುವನಹಳ್ಳಿ ಒಳ್ಳೆಯ ಕಥೆ ಮಾಡಿಕೊಂಡಿದ್ದಾರೆ. ಮಂಜು ವಿಶ್ವಕರ್ಮ ಹಾಗೂ ಕಿರಣ್‌ ಬತೂರì ಯಾವುದೇ ಕೊರತೆ ಬಾರದಂತೆ ನಿರ್ಮಾಣ ಮಾಡಿದ್ದಾರೆ.

ಈ ಚಿತ್ರದಲ್ಲಿ ನನ್ನ ಪಾತ್ರ ನನ್ನ ಹಿಂದಿನ ಚಿತ್ರಗಳಿಗಿಂತ ವಿಭಿನ್ನವಾಗಿರುತ್ತದೆ. ಅನೂಪ್‌ ಸೀಳಿನ್‌ ಸಂಗೀತದಲ್ಲಿ ಮೂಡಿಬಂದಿರುವ ಎಲ್ಲಾ ಹಾಡುಗಳು ಚೆನ್ನಾಗಿವೆ’ ಎಂದು ಖುಷಿ ಹಂಚಿಕೊಂಡರು. ಸಂಗೀತ ನಿರ್ದೇಶಕ ಅನೂಪ್‌ ಸೀಳೀನ್‌, ಛಾಯಾಗ್ರಾಹಕ ಮನೋಹರ್‌ ಜೋಶಿ ಸಿನಿಮಾ ಬಗ್ಗೆ ಮಾತನಾಡಿದರು. ಗುರುನಂದನ್‌ ಅವರಿಗೆ ನಾಯಕಿಯಾಗಿ ಮೃದಲ ನಟಿಸಿದ್ದಾರೆ.

ರವಿಶಂಕರ್‌ ಸಾಧುಕೋಕಿಲ, ಅಚ್ಯುತ್‌ ಕುಮಾರ್‌, ಚಿಕ್ಕಣ್ಣ, ಜೈ ಜಗದೀಶ್‌, ತಬಲ ನಾಣಿ, ಮಂಜುನಾಥ್‌ ಹೆಗಡೆ, ವಿಜಯ್‌ ಚೆಂಡೂರ್‌ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next