ನವದೆಹಲಿ: ಜನಪ್ರಿಯ ಹಾಸ್ಯನಟ ರಾಜು ಶ್ರೀವಾಸ್ತವ ಅವರು ಹೃದಯಾಘಾತಕ್ಕೆ ಗುರಿಯಾಗಿ ಆಸ್ಪತ್ರೆಗೆ ದಾಖಲಾಗಿ ಒಂದು ತಿಂಗಳು ಕಳೆದರೂ ವೆಂಟಿಲೇಟರ್‌ನಲ್ಲೇ ಮುಂದುವರಿದಿದ್ದಾರೆ.
ರಾಜು ಶ್ರೀವಾಸ್ತವ ಅವರ ಸಹೋದರ ದೀಪೂ ಶ್ರೀವಾಸ್ತವ ಶುಕ್ರವಾರ ಸಹೋದರನ ಆರೋಗ್ಯದ ಕುರಿತು ಹೇಳಿಕೆ ನೀಡಿದ್ದು, ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲೇ ಶ್ರೀವಾಸ್ತವ ಅವರ ಚಿಕಿತ್ಸೆಯನ್ನು ಮುಂದುವರಿಸಲು ಕುಟುಂಬವು ಬಯಸುತ್ತದೆ. ನಾವು ಬೇರೆ ಯಾವುದೇ ಆಸ್ಪತ್ರೆಗೆ ಸ್ಥಳಾಂತರಿಸುವುದಿಲ್ಲ, ನಮಗೆ ಇಲ್ಲಿನ ವೈದ್ಯರ ಮೇಲೆ ನಂಬಿಕೆ ಇದೆ ಎಂದು ಹೇಳಿದರು.
ಇದನ್ನೂ ಓದಿ: ಪ್ರತಿನಿತ್ಯ ವಿದ್ಯಾರ್ಥಿಗಳ ಜೊತೆ ತರಗತಿಯಲ್ಲಿ ಕುಳಿತು ಪಾಠ ಕೇಳುವ ಸಿಂಗಳೀಕ: ವಿಡಿಯೋ ವೈರಲ್
ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಆದರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ. ಅವರು ಶೀಘ್ರದಲ್ಲೇ ಗುಣಮುಖರಾಗುತ್ತಾರೆ. ಅವರು ಸ್ಥಿರವಾಗಿದ್ದಾರೆ ಮತ್ತು ವೆಂಟಿಲೇಟರ್‌ನಲ್ಲಿದ್ದಾರೆ. 35 ದಿನಗಳಾಗಿವೆ, ಆದರೆ ವೈದ್ಯರು ಅತ್ಯುತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ಹೇಳುತ್ತಿದ್ದಾರೆ. ನಿಮ್ಮೆಲ್ಲರ ಪ್ರಾರ್ಥನೆಗಳು ನಮಗೆ ಬೇಕು” ಎಂದು ದೀಪೂ ಪಿಟಿಐಗೆ ತಿಳಿಸಿದರು.
ಆಗಸ್ಟ್ 10 ರಂದು ಆಸ್ಪತ್ರೆಗೆ ದಾಖಲಾಗಿದ್ದರು, ಅದೇ ದಿನ ಆಂಜಿಯೋಪ್ಲ್ಯಾಸ್ಟಿಗೆ ಒಳಗಾಗಿದ್ದರು.