Advertisement
ಬಿಜೆಪಿ ಹಾಗೂ ಕಾಂಗ್ರೆಸ್‌ನಲ್ಲಿ ಈಗಾಗಲೇ ರಾಜ್ಯ ಕಮಿಟಿಗಳಿಂದ ಹೈಕಮಾಂಡ್‌ಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ರವಾನೆ ಮಾಡಲಾಗಿದೆ. ಬಿಜೆಪಿಯಲ್ಲಿ ವಿಧಾನಸಭೆಯಲ್ಲಿ ಪಕ್ಷದ ಶಾಸಕರ ಸಂಖ್ಯಾ ಬಲದ ಆಧಾರದಲ್ಲಿ ಎರಡು ಸ್ಥಾನಗಳು ದೊರೆಯಲಿದ್ದು, ಮೂರನೇ ಅಭ್ಯರ್ಥಿಗೆ ಮತಗಳ ಕೊರತೆಯಾಗಲಿದೆ.
Related Articles
Advertisement
ಈಗಿರುವ ಮಾಹಿತಿ ಪ್ರಕಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ರಾಜ್ಯದ ಬದಲು ಉತ್ತರ ಪ್ರದೇಶದಿಂದ ರಾಜ್ಯ ಸಭೆಗೆ ಕಳುಹಿಸಲು ಬಿಜೆಪಿ ಹೈಕಮಾಂಡ್ ಒಲವು ತೋರಿದೆ ಎನ್ನಲಾಗಿದೆ. ಒಂದು ವೇಳೆ ಅವರಿಗೆ ರಾಜ್ಯದಿಂದ ಟಿಕೆಟ್ ನೀಡದಿದ್ದರೆ, ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಗೀತಾ ವಿವೇಕಾನಂದ, ತೇಜಸ್ವಿನಿ ಅನಂತಕುಮಾರ್ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ಕಾಂಗ್ರೆಸ್‌ನಲ್ಲಿ ಒಂದು ಸ್ಥಾನ ದೊರೆಯಲಿದ್ದು, ಹಾಲಿ ರಾಜ್ಯಸಭಾ ಸದಸ್ಯ ಜೈರಾಮ್ ರಮೇಶ್ ಅವರಿಗೆ ನೀಡುವ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಒಲವು ತೋರಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಜೆಡಿಎಸ್‌ನಲ್ಲಿ ಸ್ವಂತ ಶಕ್ತಿಯಿಂದ ರಾಜ್ಯಸಭೆಗೆ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಶಕ್ತಿ ಇಲ್ಲದಿದ್ದರೂ, ಬಿಜೆಪಿ ಅಥವಾ ಕಾಂಗ್ರೆಸ್ ಮತಗಳನ್ನು ಪಡೆದು ಕೊಳ್ಳುವ ಸಾಮರ್ಥ್ಯ ಇರುವ ವ್ಯಕ್ತಿಗೆ ಬೆಂಬಲ ಸೂಚಿಸುವ ಕುರಿತು ಚರ್ಚೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ರಾಜ್ಯಸಭಾ ಮಾಜಿ ಸದಸ್ಯ ಕುಪೇಂದ್ರ ರೆಡ್ಡಿ ಅವರು ಮತ್ತೆ ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರ ಬೆಂಬಲದೊಂದಿಗೆ ರಾಜ್ಯಸಭೆಗೆ ಆಯ್ಕೆಯಾಗುವ ಕಸರತ್ತು ನಡೆಸುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಬಿಜೆಪಿಯಿಂದ ಆಯ್ಕೆ ಬಯಸಿರುವ ಕೆಲವರು ಜೆಡಿಎಸ್ ನಾಯಕರೊಂದಿಗೆ ಸಂಪರ್ಕದಲ್ಲಿದ್ದಾರೆನ್ನಲಾಗಿದ್ದು, ಜೆಡಿಎಸ್ ನಾಯಕರು ಯಾರ ಕಡೆ ಒಲವು ತೋರುತ್ತಾರೆ ಎನ್ನುವುದು ಕುತೂಹಲಕ್ಕೆ ಕಾರಣವಾಗಿದೆ.