Advertisement
ಒಟ್ಟು 10 ಸ್ಥಾನಗಳ ಪೈಕಿ 8 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯ ಸಾಧಿಸಿದ್ದಾರೆ. 2 ಕ್ಷೇತ್ರಗಳಲ್ಲಿ ಎಸ್‌ಪಿ ಅಭ್ಯರ್ಥಿಗಳು ಜಯ ಸಾಧಿಸಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್‌ನ 9 ಶಾಸಕರು ಬಿಜೆಪಿಯ ರಾಜ್ಯಸಭಾ ಅಭ್ಯರ್ಥಿಗೆ ಮತ ಹಾಕಿದ್ದಾರೆ. ಹೀಗಾಗಿ ವಿಪಕ್ಷ ಬಿಜೆಪಿ ಸುಖ್ವಿಂದರ್ ಸಿಂಗ್ ಸುಖು ನೇತೃತ್ವದ ಕಾಂಗ್ರೆಸ್ ಸರಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಲು ನಿರ್ಧರಿಸಿದೆ ಎನ್ನಲಾಗಿದೆ. ಈ ಮೂಲಕ ಅಡ್ಡ ಮತದಾನದಿಂದ ಉಂಟಾಗಿರುವ ರಾಜಕೀಯ ಸನ್ನಿವೇಶವನ್ನು ತನಗೆ ಅನುಕೂಲಕರವಾಗಿ ಪರಿವರ್ತಿಸಲು ಬಿಜೆಪಿ ಮುಂದಾಗಿದೆ ಎಂದು ಹೇಳಲಾಗಿದೆ.