ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಎರಡನೇ ಅಭ್ಯರ್ಥಿ ಯನ್ನು ಕಣಕ್ಕಿಳಿಸಿ ಬಿಜೆಪಿ ಗೆಲುವಿಗೆ ಅವಕಾಶ ಮಾಡಿಕೊಟ್ಟ ಬಗ್ಗೆ ಕಾಂಗ್ರೆಸ್ ಕೆಲವು ಮುಖಂಡರು ತಮ್ಮ ಪಕ್ಷದ ವಿರುದ್ಧವೇ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.
ಇದಕ್ಕೆಲ್ಲ ಸಿದ್ದರಾಮಯ್ಯನವರ ಹಠವೇ ಕಾರಣ. ಕೆಪಿಸಿಸಿ ಅಧ್ಯಕ್ಷರೂ ಅವರ ಜತೆ ಸೇರಿ ಬಿಜೆಪಿ ಗೆಲುವಿಗೆ ಪರೋಕ್ಷವಾಗಿ ಸಹಕರಿಸಿದ್ದಾರೆ. ಇದರಿಂದ ನಾವೇನು ಸಾಧಿಸಿದಂತಾಯಿತು ಎಂದು ಪ್ರಶ್ನಿಸುತ್ತಿದ್ದಾರೆ ಎನ್ನಲಾಗಿದೆ.
ಸಿದ್ದು, ಡಿಕೆಶಿ ವಾದ
ಜೆಡಿಎಸ್ ಬೆಳವಣಿಗೆಗೆ ಕಡಿವಾಣ ಹಾಕಲು ಎರಡನೇ ಅಭ್ಯರ್ಥಿಯನ್ನು ಕಣ ಕ್ಕಿಳಿಸಿದೆವು. ಇದರಿಂದ ಕಾಂಗ್ರೆಸ್‌ಗೆ ನಷ್ಟವಾಗಿಲ್ಲ. ಬದಲಿಗೆ ಅಲ್ಪಸಂಖ್ಯಾಕರ ಪರ ಬದ್ಧತೆ ಪ್ರದರ್ಶಿಸಿದಂತಾಗಿದೆ.
ರಾಜಕೀಯವಾಗಿ ಇದು ಅಗತ್ಯವಾಗಿತ್ತು ಎಂಬುದು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿ. ಪರ ನಾಯಕರ ವಾದವಾಗಿದೆ.