Advertisement

18 ರಾಜ್ಯಸಭಾ ಸ್ಥಾನಗಳಿಗೆ ಇಂದು ಚುನಾವಣೆ

02:44 AM Jun 19, 2020 | Hari Prasad |

ಹೊಸದಿಲ್ಲಿ/ಭೋಪಾಲ: ಹತ್ತು ರಾಜ್ಯಗಳಲ್ಲಿರುವ 18 ರಾಜ್ಯಸಭಾ ಸ್ಥಾನಗಳಿಗೆ ಶುಕ್ರ­ವಾರ ಚುನಾವಣೆ ನಡೆಯಲಿದೆ.

Advertisement

ಮತಗಳ ಎಣಿಕೆ ಸಂಜೆ 5 ಗಂಟೆಯ ಬಳಿಕ ನಡೆಯ­ಲಿದೆ.

ಕೋವಿಡ್ ಹಿನ್ನೆಲೆಯಲ್ಲಿ ಒಟ್ಟು 24 ಸ್ಥಾನಗಳ ಪೈಕಿ 18 ಸ್ಥಾನಗಳ ಚುನಾವಣೆಯನ್ನು ಮುಂದೂಡಲಾಗಿತ್ತು.

ಗುಜರಾತ್‌ ಮತ್ತು ಆಂಧ್ರಪ್ರದೇಶಗಳಿಂದ ತಲಾ ನಾಲ್ಕು, ಮಧ್ಯಪ್ರದೇಶ ಮತ್ತು ರಾಜಸ್ಥಾನಗಳಿಂದ ತಲಾ ಮೂರು, ಝಾರ್ಖಂಡ್‌ನಿಂದ ಎರಡು, ಮಣಿಪುರ ಮತ್ತು ಮೇಘಾಲಯಗಳಿಂದ ತಲಾ 1 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಮಧ್ಯಪ್ರದೇಶ, ಗುಜರಾತ್‌, ರಾಜಸ್ಥಾನಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ತುರುಸಿನ ಸ್ಪರ್ಧೆ ನಡೆಯುವುದು ಖಚಿತವಾಗಿದೆ. ಮಧ್ಯಪ್ರದೇಶದ ಮೂರು ರಾಜ್ಯಸಭಾ ಸ್ಥಾನಗಳ ಪೈಕಿ ಬಿಜೆಪಿ 2 ಹಾಗೂ ಕಾಂಗ್ರೆಸ್‌ 1 ಸ್ಥಾನ ಪಡೆಯುವುದು ಬಹುತೇಕ ಖಚಿತವಾಗಿದೆ.

Advertisement

ಅರ್ಜಿ ತಿರಸ್ಕೃತ: ಮತ್ತೊಂದೆಡೆ, ಗುಜರಾತ್‌ನಲ್ಲಿ ರಾಜ್ಯಸಭಾ ಚುನಾವಣೆಗೆ ತಡೆ ನೀಡು­ವಂತೆ ಕಾಂಗ್ರೆಸ್‌ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ಗುರುವಾರ ತಿರಸ್ಕರಿಸಿದೆ. ಕಾಂಗ್ರೆಸ್‌ ನಾಯಕ ಪರೇಶ್‌ ಧನಾನಿ, ‘ರಾಜ್ಯಸಭಾ ಚುನಾವಣೆಯಲ್ಲಿ ಅಂಚೆ ಮೂಲಕ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಹೀಗಾಗಿ ಶುಕ್ರವಾರ ನಡೆಯಲಿರುವ ಚುನಾವಣೆಗೆ ತಡೆ ನೀಡಬೇಕು ಎಂದು ನ್ಯಾಯಾಲಯದ ಮೊರೆ ಹೋಗಿದ್ದರು. ಗುಜರಾತ್‌ನಿಂದ ತೆರವಾಗಿರುವ 4 ರಾಜ್ಯಸಭಾ ಸ್ಥಾನಗಳಿಗೆ ಶುಕ್ರವಾರ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್‌ ತನ್ನ ಶಾಸಕರನ್ನು ರೆಸಾರ್ಟ್‌ನಲ್ಲಿ ಇರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next