ನವದೆಹಲಿ: ಗುಜರಾತ್‌ನಿಂದ ರಾಜ್ಯಸಭೆಯ 2 ಸ್ಥಾನಗಳಿಗೆ ನಡೆಯಲಿರುವ ಉಪಚುನಾವಣೆ ಪ್ರಶ್ನಿಸಿ ಸುಪ್ರೀಂಕೋರ್ಟಲ್ಲಿ ಕಾಂಗ್ರೆಸ್ ಹೂಡಿದ್ದ ದಾವೆಯನ್ನು ಸುಪ್ರೀಂಕೋರ್ಟ್ ನ್ಯಾಯಪೀಠ ವಿಚಾರಣೆಗೆ ಪರಿಗಣಿಸಲು ನಿರಾಕರಿಸಿದೆ.
ಆದರೆ, ಗುಜರಾತ್ ಕಾಂಗ್ರೆಸ್ ಘಟಕಕ್ಕೆ ಚುನಾವಣೆ ಪೂರ್ತಿಯಾದ ಬಳಿಕ ‘ಚುನಾವಣಾ ತಕರಾರು ಅರ್ಜಿ’ ಸಲ್ಲಿಸಲು ಅವಕಾಶ ನೀಡಲಾಗಿದೆ.
Advertisement
ಕೇಂದ್ರ ಸಚಿವರಾದ ಅಮಿತ್ ಶಾ, ಸ್ಮತಿ ಇರಾನಿ ಲೋಕಸಭೆಗೆ ಆಯ್ಕೆಯಾದ ಬಳಿಕ ರಾಜ್ಯಸಭೆಯ 2 ಸ್ಥಾನ ತೆರವಾಗಿತ್ತು. ಆ ಸ್ಥಾನಗಳಿಗೆ ಪ್ರತ್ಯೇಕವಾಗಿ ಚುನಾವಣೆ ನಡೆಸುವ ಚುನಾವಣಾ ಆಯೋಗದ ನಿರ್ಧಾರ ಪ್ರಶ್ನಿಸಿ ಗುಜರಾತ್ ಕಾಂಗ್ರೆಸ್ ಶಾಸಕ ಪರೇಶ್ ಭಾಯ್ ಧನಾನಿ ಸುಪ್ರೀಂ ಕೋರ್ಟ್‌ನಲ್ಲಿ ದಾವೆ ಹೂಡಿದ್ದರು.