Advertisement
ಅವರಿಗೆ 55 ವರ್ಷ ವಯಸ್ಸಾಗಿತ್ತು.
Related Articles
Advertisement
ಮೂಲತಃ ರಾಯಚೂರು ಜಿಲ್ಲೆಯ ಲಿಂಗಸೂಗೂರಿನವರಾದ ಗಸ್ತಿ, ಕಳೆದ ನಾಲ್ಕು ದಶಕಗಳಿಂದ ನಗರದಲ್ಲಿ ನೆಲೆಸಿದ್ದರು. ಮೂರು ದಶಕದಿಂದ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದರು. ಅವರು ತೋರಿದ್ದ ಪಕ್ಷ ನಿಷ್ಠೆ ಪರಿಗಣಿಸಿ ಈಚೆಗೆ ರಾಜ್ಯಸಭೆಗೆ ಆಯ್ಕೆ ಮಾಡಲಾಗಿತ್ತು.
ಅಶೋಕ್ ಗಸ್ತಿ ಅವರು ಪ್ರಮಾಣ ವಚನ ಸ್ವೀಕರಿಸಿದ್ದರೂ ರಾಜ್ಯಸಭಾ ಕಲಾಪದಲ್ಲಿ ಪಾಲ್ಗೊಳ್ಳದೆ ಚಿಕಿತ್ಸೆ ಪಡೆಯುತ್ತಿದ್ದರು.
ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರಾಗಿದ್ದ ಅಶೋಕ್ ಗಸ್ತಿ ಅವರು ಪಕ್ಷಕ್ಕೆ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಹೈಕಮಾಂಡ್ ಗಸ್ತಿ ಅವರನ್ನು ಇತ್ತೀಚೆಗಷ್ಟೇ ರಾಜ್ಯಸಭೆಗೆ ಆಯ್ಕೆ ಮಾಡಿತ್ತು. ಆದರೆ ಮೇಲ್ಮನೆ ಸಂಸದರಾಗಿ ಜನಸೇವೆಯನ್ನು ಮಾಡುವ ಅವಕಾಶವೇ ಗಸ್ತಿ ಅವರಿಗೆ ಲಭಿಸದೇ ಇರುವುದು ಅವರ ಅಭಿಮಾನಿಗಳನ್ನು ಮತ್ತು ಕುಟುಂಬ ಸದಸ್ಯರನ್ನು ತೀವ್ರ ಆಘಾತಕ್ಕೀಡುಮಾಡಿದೆ.
ಗಸ್ತಿ ಅವರ ಅಕಾಲಿಕ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಬಿ.ಎಲ್. ಸಂತೋಷ್, ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವರು ಸಂತಾಪ ವ್ಯಕ್ತಪಡಿಸಿದ್ದಾರೆ.