Advertisement

ರಾಜ್ಯ ಸಭೆ ಸದಸ್ಯ ಡಾ|ವಿರೇಂದ್ರ ಹೆಗ್ಗಡೆ ಆಪ್ತ ಕಾರ್ಯದರ್ಶಿಯಾಗಿ ಜನಾರ್ದನ

12:03 AM Jul 24, 2022 | Team Udayavani |

ಬೆಳ್ತಂಗಡಿ:ರಾಜ್ಯ ಸಭೆಯ ಸದಸ್ಯರಾಗಿ ನೇಮಕವಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ|ವಿರೇಂದ್ರ ಹೆಗ್ಗಡೆ ಅವರಆಪ್ತ ಕಾರ್ಯದರ್ಶಿಯಾಗಿ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಆಡಳಿತ ನಿರ್ದೇಶಕರಾಗಿರುವ ಕೆ.ಎನ್‌. ಜನಾರ್ದನ ಅವರನ್ನು ನೇಮಕ ಮಾಡಲಾಗಿದೆ.

Advertisement

ಡಾ| ಹೆಗ್ಗಡೆ ಅವರು ಜು. 21ರಂದು ದಿಲ್ಲಿಯ ಸಂಸತ್‌ ಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಜನಾರ್ದನ ಅವರಿಗೆ ನೇಮಕಾತಿ ಪತ್ರ ಹಸ್ತಾಂತರಿಸಿದರು.

ಉಜಿರೆ ರುಡ್‌ಸೆಟ್‌ ಸಂಸ್ಥೆಗಳ ಕೇಂದ್ರ ಕಚೇರಿಯ ಕಾರ್ಯನಿರ್ವಾಹಕ ನಿರ್ದೇಶಕರಾಗಿ, ಆರ್‌ಸೆಟಿಗಳ ರಾಷ್ಟ್ರೀಯ ನಿರ್ದೇಶಕರಾಗಿ ಹೆಗ್ಗಡೆಯವರ ಕನಸಿನ ಯೋಜನೆಯಾದ ಆರ್‌ಸಿಟಿಗಳನ್ನು ಸ್ಥಾಪಿಸಿ ಬೆಳೆಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ. ಪ್ರಸಕ್ತ ಶ್ರಿ ಕ್ಷೇತ್ರದ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next