Advertisement

ಜಮ್ಮು-ಕಾಶ್ಮೀರ ಪುನರ್ ರಚನೆ ಮಸೂದೆ ರಾಜ್ಯಸಭೆಯಲ್ಲಿ ಪಾಸ್, ಲಡಾಖ್ ಕೇಂದ್ರಾಡಳಿತ ಪ್ರದೇಶ

05:36 PM Aug 06, 2019 | Team Udayavani |

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ರಾಜ್ಯಸಭೆಯಲ್ಲಿ ಮಂಡಿಸಿದ್ದ ಕಾಶ್ಮೀರ ಪುನರ್ ರಚನೆ ವಿಧೇಯಕ ಅಂಗೀಕಾರಗೊಂಡಿದೆ.

Advertisement

ಅಮಿತ್ ಶಾ ಮಂಡಿಸಿದ್ದ ವಿಧೇಯಕದ ಪ್ರಸ್ತಾಪವನ್ನು ಮಂಡಿಸಿದ್ದು, ಅದರ ಮೇಲೆ ಆಡಳಿತ ಮತ್ತು ವಿರೋಧ ಪಕ್ಷದ ಸಂಸದರು ಪರ, ವಿರೋಧ ಅಭಿಪ್ರಾಯ ಮಂಡಿಸಿದ್ದರು. ಅದಾದ ಬಳಿಕ ವಿಧೇಯಕವನ್ನು ಧ್ವನಿ ಮತದ ಮೂಲಕ ಮತಕ್ಕೆ ಹಾಕಲಾಯಿತು. ಕೆಲವು ಸದಸ್ಯರ ಬೇಡಿಕೆಯಂತೆ ಮತ ಚಲಾವಣೆಯೂ ನಡೆಯಿತು.

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370ನೇ ವಿಧಿ ರದ್ದುಗೊಳಿಸಿ, ಕಾಶ್ಮೀರ ಪುನರ್ ರಚನೆ ಕುರಿತು ಮಂಡಿಸಿದ ವಿಧೇಯಕಕ್ಕೆ ರಾಜ್ಯಸಭೆಯಲ್ಲಿ 125 ಸದಸ್ಯರು ಪರವಾಗಿ ಮತ ಚಲಾಯಿಸಿದ್ದು, 61 ಸದಸ್ಯರು ವಿರೋಧಿಸಿ ಮತ ಚಲಾಯಿಸಿದ್ದಾರೆ.

ಜಮ್ಮು-ಕಾಶ್ಮೀರ ವಿಧಾನಸಭೆಯಲ್ಲಿ ಒಳಗೊಂಡಿರುವ ಲಡಾಖ್ ಗೆ ಕೇಂದ್ರಾಡಳಿತ ಸ್ಥಾನಮಾನ ನೀಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next