Advertisement

ರಾಜ್ಯಸಭೆ: 16 ರಲ್ಲಿ 8 ಬಿಜೆಪಿಗೆ; ಹಿರಿಯ ಕಾಂಗ್ರೆಸ್ ನಾಯಕ ಅಜಯ್ ಮಾಕನ್ ಗೆ ಸೋಲು

02:13 PM Jun 11, 2022 | Team Udayavani |

ನವದೆಹಲಿ: ನಾಲ್ಕು ರಾಜ್ಯಗಳಲ್ಲಿ ಶುಕ್ರವಾರ (ಜೂನ್ 10) ನಡೆದ ರಾಜ್ಯಸಭಾ ಚುನಾವಣೆಗಳಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ. ರಾಜ್ಯಸಭೆಯ 16 ತೆರವಾದ ಸ್ಥಾನಗಳಿಗೆ ಮತದಾನ ನಡೆದಿದ್ದು, 8ರಲ್ಲಿ ಬಿಜೆಪಿ ಗೆದ್ದಿದೆ.

Advertisement

ಮಹಾರಾಷ್ಟ್ರ, ಹರಿಯಾಣ, ರಾಜಸ್ಥಾನ ಮತ್ತು ಕರ್ನಾಟಕದಲ್ಲಿ ಜಿದ್ದಾಜಿದ್ದಿನ ಸ್ಪರ್ಧೆಯಾಗಿ ಮಾರ್ಪಟ್ಟಿತ್ತು, ರಾಜಸ್ಥಾನದಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿ ಮೂರು ಸ್ಥಾನ ಗೆದ್ದಿದೆ. ಕಾಂಗ್ರೆಸ್ ಐದು ಸ್ಥಾನಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, ಉಳಿದ ಸ್ಥಾನಗಳನ್ನು ಮಹಾರಾಷ್ಟ್ರದ ಮಿತ್ರಪಕ್ಷಗಳಾದ ಶಿವಸೇನೆ ಮತ್ತು ಎನ್‌ಸಿಪಿ ಗೆದ್ದಿದ್ದು, ಒಂದು ಸ್ಥಾನ ಹರಿಯಾಣದ ಬಿಜೆಪಿ ಬೆಂಬಲಿತ ಸ್ವತಂತ್ರ ಅಭ್ಯರ್ಥಿ ಗೆದ್ದಿದ್ದಾರೆ.

ಪ್ರತಿಸ್ಪರ್ಧಿ ಪಕ್ಷಗಳ ವ್ಯಾಪಾರ ಆರೋಪಗಳೊಂದಿಗೆ ಹರಿಯಾಣ ಮತ್ತು ಮಹಾರಾಷ್ಟ್ರದಲ್ಲಿ ಮತ ಎಣಿಕೆ ವಿಳಂಬವಾಯಿತು.ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್‌ನ ಮಹಾರಾಷ್ಟ್ರದ ಆಡಳಿತಾರೂಢ ಮೈತ್ರಿಕೂಟಕ್ಕೆ ಆಘಾತಕಾರಿ ಹಿನ್ನಡೆಯಾಗಿ, ಬಿಜೆಪಿಯು ರಾಜ್ಯದಿಂದ ಆರು ರಾಜ್ಯಸಭಾ ಸ್ಥಾನಗಳಲ್ಲಿ ಮೂರನ್ನು ಕಸಿದುಕೊಂಡಿದೆ. ಕ್ರಾಸ್ ವೋಟಿಂಗ್ ಮತ್ತು ಚುನಾವಣಾ ನಿಯಮಗಳ ಉಲ್ಲಂಘನೆ ಆರೋಪದ ನಂತರ ಎಣಿಕೆ ಸುಮಾರು ಎಂಟು ಗಂಟೆಗಳ ಕಾಲ ವಿಳಂಬವಾದ ನಂತರ ಫಲಿತಾಂಶಗಳನ್ನು ಘೋಷಿಸಲಾಯಿತು.

ಬಿಜೆಪಿ ಅಭ್ಯರ್ಥಿಗಳಾಗಿದ್ದ ಕೇಂದ್ರ ಸಚಿವ ಪಿಯೂಷ್ ಗೋಯಲ್ ಮತ್ತು ಮಾಜಿ ರಾಜ್ಯ ಸಚಿವ ಅನಿಲ್ ಬೋಂಡೆ ಮತ್ತು ಧನಂಜಯ್ ಮಹಾದಿಕ್ ಸೇರಿದ್ದಾರೆ. ಎಂವಿಎ ಮೈತ್ರಿಕೂಟದಿಂದ ಕಣಕ್ಕಿಳಿದಿದ್ದ ಅಭ್ಯರ್ಥಿಗಳ ಪೈಕಿ ಶಿವಸೇನೆಯ ಸಂಜಯ್ ರಾವುತ್, ಎನ್‌ಸಿಪಿಯ ಪ್ರಫುಲ್ ಪಟೇಲ್ ಮತ್ತು ಕಾಂಗ್ರೆಸ್‌ನ ಇಮ್ರಾನ್ ಪ್ರತಾಪ್‌ಘರ್ಹಿ ಗೆಲುವು ಸಾಧಿಸಿದ್ದಾರೆ.

ಹರಿಯಾಣದಲ್ಲಿ ಕಾಂಗ್ರೆಸ್‌ಗೆ ದೊಡ್ಡ ಹಿನ್ನಡೆಯಲ್ಲಿ ಹಿರಿಯ ನಾಯಕ ಅಜಯ್ ಮಾಕನ್ ಅವರು ಸಾಕಷ್ಟು ಮತಗಳನ್ನು ಪಡೆಯದೆ ಸೋತ್ತಿದ್ದಾರೆ. ಹರಿಯಾಣದ ಎರಡು ರಾಜ್ಯಸಭಾ ಸ್ಥಾನಗಳಿಗೆ ಬಿಜೆಪಿಯ ಕ್ರಿಶನ್ ಲಾಲ್ ಪನ್ವಾರ್ ಮತ್ತು ಬಿಜೆಪಿ ಬೆಂಬಲಿತ ಸ್ವತಂತ್ರ ಅಭ್ಯರ್ಥಿ ಕಾರ್ತಿಕೇಯ ಶರ್ಮಾ ಆಯ್ಕೆಯಾಗಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next