Advertisement

ಮತ್ತೆ ಮಾರಾಮಾರಿ! ಒಕ್ಕಲಿಗರ ಸಂಘದ ಅಧ್ಯಕ್ಷ ಅಪ್ಪಾಜಿ ಗೌಡ ಪದಚ್ಯುತಿ

03:21 PM Jan 06, 2017 | Sharanya Alva |

ಬೆಂಗಳೂರು:ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಸ್ಥಾನದಿಂದ ಡಾ.ಅಪ್ಪಾಜಿ ಗೌಡ ಅವರನ್ನು ಅಪ್ಪಾಜಿ ಗೌಡ ವಿರೋಧಿ ಬಣ ಅವಿಶ್ವಾಸ ನಿರ್ಣಯ ಮಂಡಿಸುವ ಮೂಲಕ ಪದಚ್ಯುತಿಗೊಳಿಸಿದೆ. ಇದರಿಂದಾಗಿ ರಾಜ್ಯ ಒಕ್ಕಲಿಗರ ಸಂಘದ ಜಟಾಪಟಿ ಮತ್ತಷ್ಟು ರಾದ್ಧಾಂತಕ್ಕೆ ನಾಂದಿ ಹಾಡಿದೆ.

Advertisement

ಇಲ್ಲಿನ ಕಿಮ್ಸ್ ಆಸ್ಪತ್ರೆ ಆವರಣದಲ್ಲಿರುವ ಒಕ್ಕಲಿಗರ ಸಂಘದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅಪ್ಪಾಜಿ ಗೌಡ ಅವರ ವಿರೋಧಿ ಬಣ ಅವಿಶ್ವಾಸ ನಿರ್ಣಯ ಮಂಡಿಸಿದೆ. ಈ ಸಂದರ್ಭದಲ್ಲಿ ಅಪ್ಪಾಜಿ ಗೌಡ ಪರ ಮತ್ತು ವಿರೋಧಿ ಬಣದ ನಡುವೆ ಹೊಡೆದಾಟ ನಡೆದಿರುವುದಾಗಿ ಮಾಧ್ಯಮದ ವರದಿ ಹೇಳಿದೆ.

ಒಕ್ಕಲಿಗರ ಸಂಘದ ಅಧ್ಯಕ್ಷ ಸ್ಥಾನದಿಂದ ಅಪ್ಪಾಜಿ ಗೌಡ ಅವರನ್ನು ಪದಚ್ಯುತಗೊಳಿಸುವ ಅವಿಶ್ವಾಸ ನಿರ್ಣಯದ ಪರವಾಗಿ 18 ಮಂದಿ ಕಾರ್ಯಕಾರಿಣಿ ಸಮಿತಿ ನಿರ್ದೇಶಕರು ಸಹಿ ಹಾಕಿದ್ದಾರೆ. ರಿಜಿಸ್ಟ್ರಾರ್ ಬಸವಯ್ಯ ನೇತೃತ್ವದಲ್ಲಿ ಪದಚ್ಯುತಿ ನಿರ್ಧಾರ ಕೈಗೊಂಡಿರುವುದಾಗಿ ವರದಿ ತಿಳಿಸಿದೆ.

ಜನವರಿ 18ರಂದು ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರ ಆಯ್ಕೆಗಾಗಿ ಚುನಾವಣೆ ನಡೆಯಲಿದೆ ಎಂದು ಮೂಲಗಳು ಹೇಳಿವೆ. ಕಳೆದ ವರ್ಷ ಜುಲೈ ತಿಂಗಳಲ್ಲಿ ರಾಜ್ಯ ಒಕ್ಕಲಿಗರ ಸಂಘದ ಪದಾಧಿಕಾರಿಗಳ ಆಯ್ಕೆಗೆ ನಡೆದಿದ್ದ ಚುನಾವಣೆಯಲ್ಲಿ ಡಾ.ಅಪ್ಪಾಜಿ ಗೌಡ ಅವರು ಅಧ್ಯಕ್ಷರಾಗಿ ಅವಿರೋಧವಾಗಿ ಪುನರಾಯ್ಕೆಗೊಂಡಿದ್ದರು ಎಂಬುದು ಗಮನಾರ್ಹ.

Advertisement

Udayavani is now on Telegram. Click here to join our channel and stay updated with the latest news.

Next