ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಯಶವಂತಪುರ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅವರು ಕಾಂಗ್ರೆಸ್ ಅಭ್ಯರ್ಥಿ ಪರ ಮತ ಹಾಕಿದ್ದಾರೆ ಎಂದು ವರದಿಯಾಗಿದೆ. ಅಡ್ಡ ಮತದಾನ ಮಾಡುವ ಮೂಲಕ ಸ್ವಪಕ್ಷಕ್ಕೆ ದೊಡ್ಡ ಹೊಡೆತ ನೀಡಿದ್ದಾರೆ.
“ಮತ ಚಲಾಯಿಸುವ ಮೊದಲು ಎಸ್.ಟಿ.ಸೋಮಶೇಖರ್ ಅವರು, “ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಆಗಲು ಪ್ರಯತ್ನಿಸಿದ್ದೆ. ಆದರೆ ಅವರು ಕಾಲಾವಕಾಶ ನೀಡಲಿಲ್ಲ. ಅಭಿವೃದ್ಧಿಗೆ ಯಾರು ಅನುದಾನ ಕೊಡುತ್ತಾರೋ ಅವರಿಗೆ ಮತ ಹಾಕುತ್ತೇನೆ ಎಂದು ಹೇಳಿದ್ದರು.
ಬಿಜೆಪಿ ಅಥವಾ ಮೈತ್ರಿ ಅಭ್ಯರ್ಥಿಗೆ ಮತ ಹಾಕುವ ಬದಲು ಅವರು ಕಾಂಗ್ರೆಸ್ ಅಭ್ಯರ್ಥಿಗೆ ಮತಹಾಕಿದ್ದಾರೆ ಎಂದು ವರದಿಯಾಗಿದೆ.
“ಆತ್ಮಸಾಕ್ಷಿಯಂತೆ ಮತ ಚಲಾಯಿಸಿ ಮತ ಪತ್ರವನ್ನು ಚುನಾವಣಾ ಏಜೆಂಟ್ ಗೆ ತೋರಿಸಿದ್ದೇನೆ” ಎಂದು ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.