ಬೆಂಗಳೂರು : ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಮೊತ್ತವನ್ನು 1 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೋಮವಾರ ಘೋಷಿಸಿದ್ದಾರೆ.
ರಾಜ್ಯೋತ್ಸವ ಪ್ರಶಸ್ತಿ ಸಮಾರಂಭದಲ್ಲಿ ಸಾಧಕ ಮತ್ತು ಸಂಸ್ಥೆಗಳಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಮುಖ್ಯಮಂತ್ರಿಗಳು, ಪ್ರಶಸ್ತಿ ಮೊತ್ತವನ್ನು 1 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಿಸಲಾಗುವುದು, ಮುಂದಿನ ವರ್ಷದಿಂದ ಇದು ಚಾಲನೆಗೆ ಬರಲಿದೆ ಎಂದರು.
ರಾಜ್ಯೋತ್ಸವ ಪ್ರಶಸ್ತಿಗೆ ವಯಸ್ಸಿನ ಮೀತಿ ಈಗ 60 ವರ್ಷ ಇದೆ.ಅದನ್ನು ಇಳಿಕೆ ಮಾಡಲಾಗುವುದು. ಈ ಸಂಬಂಧ ನ್ಯಾಯಾಲಕ್ಕೆ ಅಫಿಡಿವಿಟ್ ಹಾಕಲಾಗುವುದು ಎಂದು ತಿಳಿಸಿದರು.
ಕನ್ನಡ ರಾಜ್ಯೋತ್ಸವ ಮುಂದಿನ ದಿನಗಳಲ್ಲಿ ಕನ್ನಡ ಜನೋತ್ಸವವನ್ನಾಗಿ ಆಚರಿಸಲಾಗುವುದು. ನವ ಕರ್ನಾಟಕ ಕಟ್ಟುವ ಚಿಂತನೆ ಹೊಂದಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ರಾಜ್ಯಪ್ರಶಸ್ತಿ ನೀಡುವ ನಿಯಮ ಕೂಡ ಬದಲಾಗಲಿದ್ದು, .ಅರ್ಜಿ ಹಾಕದೆ ಪ್ರಶಸ್ತಿ ನೀಡಲಾಗವುದು.ಸರ್ಕಾರವೇ ಸಾಧಕರನ್ನು ಗುರುತಿಸಿ ಗೌರವಿಸಲಿದೆ. ಪ್ರಶಸ್ತಿಗೆ ಅರ್ಜಿ ಹಾಕುವ ಅವಶ್ಯಕತೆಯಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು.