Advertisement

ರಾಜ್ಯೋತ್ಸವ ಪ್ರಶಸ್ತಿ: ಜನರಿಂದಲೇ ಸಾಧಕರ ಆಯ್ಕೆ; ಸಚಿವ ವಿ. ಸುನಿಲ್‌ ಕುಮಾರ್‌ 

09:44 PM Aug 18, 2022 | Team Udayavani |

ಬೆಂಗಳೂರು: ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿಗೆ ಈ ಬಾರಿ ಅರ್ಜಿ ಆಹ್ವಾನಿಸುವುದಿಲ್ಲ. ಜನರ ಮೂಲಕವೇ ಸಾಧಕರನ್ನು ಆಯ್ಕೆ ಮಾಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್‌ ಕುಮಾರ್‌ ತಿಳಿಸಿದ್ದಾರೆ.

Advertisement

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ರಂಗಾಯಣದ ಸಹಯೋಗದಲ್ಲಿ “ಅಮೃತ ಭಾರತಿಗೆ ಕನ್ನಡದಾರತಿ’ ಅಭಿಯಾನದ ಅಂಗವಾಗಿ ಹಮ್ಮಿಕೊಂಡ ನಾಟಕ ಪ್ರದರ್ಶನಕ್ಕೆ ಗುರುವಾರ ನಗರದ ನಯನ ರಂಗಮಂದಿರದಲ್ಲಿ ಚಾಲನೆ ನೀಡಿ ಮಾತನಾಡಿದ ಅವರು,  ಪ್ರಶಸ್ತಿಗೆ ಸಂಬಂಧಿಸಿ ಆಯ್ಕೆ ಸಮಿತಿ ರಚಿಸಲಾಗುವುದು. ಆ ಸಮಿತಿಯು ರಾಜ್ಯಾದ್ಯಂತ ಸುತ್ತಾಡಿ ಜನರ ಸಲಹೆಗಳಿಗೆ ಅನುಗುಣವಾಗಿ ಅರ್ಹರನ್ನು ಆಯ್ಕೆ ಮಾಡಲಿದೆ ಎಂದು ಹೇಳಿದರು.

ಈ ಬಾರಿ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಿದ್ದು, ಇದಕ್ಕಾಗಿ ಈಗಿನಿಂದಲೇ ಸಿದ್ಧತೆಗಳು ಆರಂಭವಾಗಿವೆ ಎಂದ ಅವರು, ಅಮೃತ ಭಾರತಿಗೆ ಕನ್ನಡದಾರತಿ ಅಭಿಯಾನದ ಅಂಗವಾಗಿ ನಡೆಯುತ್ತಿರುವ ನಾಟಕ ಪ್ರದರ್ಶನವನ್ನು ಡಿಸೆಂಬರ್‌ವರೆಗೂ ನಡೆಸುವ ಚಿಂತನೆ ಇದೆ. ಈ ಮೂಲಕ ಕರ್ನಾಟಕದ ಹೋರಾಟದ ಹಾದಿಯನ್ನು ತಿಳಿಸುವ ಪ್ರಯತ್ನ ಇದಾಗಿದೆ ಎಂದು ಹೇಳಿದರು.

ಮಳೆಗಾಲದ ಅಧಿವೇಶನ ಸಂದರ್ಭದಲ್ಲಿ ಶಾಸಕರಿಗೂ ನಾಟಕ ಪ್ರದರ್ಶನ ಏರ್ಪಡಿಸಲಾಗಿದೆ. ಸೆಪ್ಟಂಬರ್‌ನಲ್ಲಿ ಅಧಿವೇಶನ ನಡೆಯಲಿದ್ದು, ಬ್ಯಾಂಕ್ವೆಟ್‌ ಹಾಲ್‌ನಲ್ಲಿ ನಾಟಕ ಪ್ರದರ್ಶಿಸಲು ಉದ್ದೇಶಿಸಲಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next