Advertisement

Rajyotsava award: ಎಲ್ಲಾ ಜಾತಿ, ಧರ್ಮ, ಲಿಂಗಗಳಿಗೂ ಪ್ರಾತಿನಿಧ್ಯ ನೀಡಲು ಸಿಎಂ ಸೂಚನೆ

03:06 PM Oct 26, 2023 | Team Udayavani |

ಬೆಂಗಳೂರು: ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡುವ ಸಂದರ್ಭದಲ್ಲಿ ಅರ್ಹರಿಗೆ ಪ್ರಶಸ್ತಿ ನೀಡಬೇಕು. ಪ್ರಾದೇಶಿಕ ನ್ಯಾಯ ಕಡ್ಡಾಯವಾಗಿ ಪಾಲಿಸಬೇಕು. ಎಲ್ಲಾ ಜಾತಿ, ಧರ್ಮ, ಲಿಂಗಗಳಿಗೂ ಪ್ರಾತಿನಿಧ್ಯ ದೊರಕಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

Advertisement

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕರ್ನಾಟಕ ಎಂದು ಮರುನಾಮಕರಣವಾಗಿ 50 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ಕನ್ನಡದ ಪರವಾಗಿ ಕಾರ್ಯನಿರ್ವಹಿಸಿರುವ ಸಂಘ ಸಂಸ್ಥೆಗಳಿಗೆ ಒಟ್ಟಾರೆ 10 ಪ್ರಶಸ್ತಿಗಳನ್ನು ನೀಡಬೇಕು ಎಂದು ಆಯ್ಕೆ ಸಮಿತಿ ಸದಸ್ಯರು ಅಭಿಪ್ರಾಯಪಟ್ಟರು.

ಈ ಬಾರಿ 68 ರಾಜ್ಯೋತ್ಸವ ಪ್ರಶಸ್ತಿಗಳನ್ನು ನೀಡಬೇಕಿದ್ದು, ಕರ್ನಾಟಕ ಸಂಭ್ರಮದ ಪ್ರಯುಕ್ತ ಸಂಘ ಸಂಸ್ಥೆಗಳಿಗೆ 10 ಪ್ರಶಸ್ತಿಗಳನ್ನು ನೀಡಲು ಸಭೆಯಲ್ಲಿ ತೀರ್ಮಾನ ಮಾಡಲಾಯಿತು.

ಅರ್ಜಿ ಕೊಡುವವವರು ಹೆಚ್ಚಿದ್ದ ಕಾರಣ, ಅದಕ್ಕೆ ಕಡಿವಾಣ ಹಾಕಲು ಏಕೀಕರಣ ಆಗಿ ಎಷ್ಟು ವರ್ಷಗಳಾಯಿತೋ, ಅಷ್ಟು ಪ್ರಶಸ್ತಿಗಳನ್ನು ನೀಡಲು ಹಿಂದೆ ನಮ್ಮ ಸರ್ಕಾರವೇ ತೀರ್ಮಾನ ಕೈಗೊಂಡಿತ್ತು ಎಂದು ಮುಖ್ಯಮಂತ್ರಿಗಳು ತಿಳಿಸಿದರು

Advertisement
Advertisement

Udayavani is now on Telegram. Click here to join our channel and stay updated with the latest news.

Next