Advertisement

ರಾಜ್ಯೋತ್ಸವ ಪ್ರಶಸ್ತಿ ಮೊತ್ತ 2 ಲಕ್ಷ ರೂ.ಗೆ ಹೆಚ್ಚಳ ?

06:00 AM Oct 24, 2017 | Harsha Rao |

ಬೆಂಗಳೂರು: ರಾಜ್ಯ ಸರಕಾರ ಈ ವರ್ಷ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಮೊತ್ತವನ್ನು 2 ಲಕ್ಷ ರೂ.ಗಳಿಗೆ ಹೆಚ್ಚಿಸುವ ಕುರಿತು ಚಿಂತನೆ ನಡೆಸಿದೆ.

Advertisement

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೀಡುವ ರಾಜ್ಯ ಮತ್ತು ರಾಷ್ಟ್ರೀಯ ಪ್ರಶಸ್ತಿಗಳ ಮೊತ್ತ ಮೂರರಿಂದ 10 ಲಕ್ಷ ರೂ.ಗಳವರೆಗೂ ಏರಿಕೆಯಾಗಿರುವುದರಿಂದ ರಾಜ್ಯೋತ್ಸವ ಪ್ರಶಸ್ತಿ ಮೊತ್ತವನ್ನು ಹೆಚ್ಚಳ ಮಾಡಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆರ್ಥಿಕ ಇಲಾಖೆಗೆ ಪ್ರಸ್ತಾವ ಸಲ್ಲಿಸಿದೆ.

ಈ ಕುರಿತು ಇತ್ತೀಚೆಗೆ ನಡೆದ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿ ಸಭೆಯಲ್ಲಿ ಚರ್ಚೆಯಾಗಿದ್ದು, ಪ್ರಶಸ್ತಿ ಮೊತ್ತವನ್ನು 3 ಲಕ್ಷ ರೂ.ಗಳಿಗೆ ಹೆಚ್ಚಳ ಮಾಡುವಂತೆ ಪ್ರಸ್ತಾವ ಸಲ್ಲಿಸಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ 2 ಲಕ್ಷ ರೂ. ಗಳಿಗೆ ಏರಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಅಲ್ಲದೆ ಪ್ರಶಸ್ತಿ ಜತೆ ನೀಡುವ 20 ಗ್ರಾಂ ಚಿನ್ನದ ಬದಲು 25 ಗ್ರಾಂ ಚಿನ್ನ ನೀಡಬೇಕೆಂದು ಪ್ರಸ್ತಾವಿಸಲಾಗಿದ್ದು, ಈ ಕುರಿತು ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯ ಅಂತಿಮ ತೀರ್ಮಾನ ತೆಗೆದುಕೊಳ್ಳಬೇಕು.

ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಕುರಿತಂತೆ ಮಂಗಳವಾರ ಸಿಎಂ ಅಧ್ಯಕ್ಷತೆಯಲ್ಲಿ ಸಭೆ ನಡೆಯ ಲಿದ್ದು, ಈ ಸಭೆಯಲ್ಲಿ ಪ್ರಶಸ್ತಿ ಮೊತ್ತ ಹೆಚ್ಚಳ ಕುರಿತು ಚರ್ಚೆಯಾಗುವ ಸಾಧ್ಯತೆ ಇದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next