Advertisement
ಇದಕ್ಕೆ ಸ್ಪಷ್ಟ ಉದಾಹರಣೆ ಸುಮಂಗಲಮ್ಮ. ವಸುಂಧರ ಕೃಷಿ ಕ್ಷೇತ್ರದ ಮಾಲಕಿಯಾಗಿರುವ ಇವರು ರೇಷ್ಮೆ ಕೃಷಿ, ತೆಂಗು, ಹುಣಸೆ, ಶ್ರೀಗಂಧ, ಅಜೋಲಾ, ಹಸು ಸಾಕಣೆ, ಮೇಕೆ ಸಾಕಣೆ, ಎರೆಹುಳ ಸಾಕಣೆ, ರೇಷ್ಮೇ ಗೂಡು ಉತ್ಪಾದನೆ, ಬಾಳೆ ಸೇರಿದಂತೆ ಹಲವು ಕೃಷಿಗಳನ್ನು ಮಾಡಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬಿಜಿ ಕೆರೆ ಗ್ರಾಮದ ಕೃಷಿಕ ವೀರಭದ್ರಪ್ಪನವರ ಪತ್ನಿ ಸುಮಂಗಲಮ್ಮ ರಾಜ್ಯದಲ್ಲಿಯೇ ಮೊದಲು ಟ್ರ್ಯಾಕ್ಟರ್ ಲೈಸೆನ್ಸ್ ಪಡೆದಿದ್ದ ಮಹಿಳೆ, ಹೆಂಗಸರು ಟ್ರ್ಯಾಕ್ಟರ್ ಓಡಿಸುತ್ತಾರಾ? ಅವರಿಗೆ ಅದೆಲ್ಲಾ ಸಾಧ್ಯನಾ? ಹೀಗೆ ಹತ್ತಾರು ಪ್ರಶ್ನೆಗಳನ್ನು ಮುಂದಿಡುವವರಿಗೆ ಟ್ರ್ಯಾಕ್ಟರ್ ಓಡಿಸಿ ತೋರಿಸಿದ್ದರು.
Related Articles
ಇವರು ಕೃಷಿ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಮಾಡಿದ ಸಾಧನೆಯಿಂದಾಗಿ ಸರಕಾರ 2020-21 ಸಾಲಿನಲ್ಲಿ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಅಲ್ಲದೆ ಇವರು ಮಾಡಿರುವ ಕಾರ್ಯಕ್ಕೆ ಹಲವಾರು ಪ್ರಶಸ್ತಿಗಳು ಲಭಿಸಿವೆ. ಎಲ್.ಎಂ ಪಟೇಲ್ ಸಂಸ್ಥೆಯಿಂದ 2010ನೇ ಸಾಲಿನ “ಅತ್ಯುತ್ತಮ ರೇಷ್ಮೇ ಬೆಳೆಗಾರ’ ರಾಷ್ಟ್ರೀಯ ಪ್ರಶಸ್ತಿ, 1995-96ನೇ ಸಾಲಿನ ರೇಷ್ಮೆ ಬೆಳೆ ಅಭಿವೃದ್ಧಿಯಲ್ಲಿ ಉತ್ತಮ ಮಹಿಳಾ ಉದ್ಯಮಶೀಲತೆ ರಾಷ್ಟ್ರೀಯ ಪ್ರಶಸ್ತಿ, ಕೇಂದ್ರಿಯ ರೇಷ್ಮೆ ಮಂಡಳಿ ಪ್ರಶಸ್ತಿಯೂ ಲಭಿಸಿದೆ. 75ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೃಷಿ ಸಮುದಾಯಕ್ಕೆ ಉತ್ತಮ ಪ್ರೇರಕರಾಗಿ ಆಯ್ಕೆಯಾಗಿದ್ದರು. 2007-08ನೇ ಸಾಲಿನ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (ನಬಾರ್ಡ್) ಸಂಸ್ಥೆಯಿಂದ ರೈತರ ಒಕ್ಕೂಟದ ಅಭಿವೃದ್ಧಿಗೆ ಉತ್ತಮ ಸಾಧನೆ ಪ್ರಶಸ್ತಿಯನ್ನೂ ಮೂಡಿಗೆರಿಸಿಕೊಂಡಿದ್ದಾರೆ.
Advertisement
ಇತ್ತೀಚೆಗೆ ಹೃದಯಾಘಾತದಿಂದ ನಮ್ಮನ್ನು ಅಗಲಿದ್ದಾರೆ. ಆದರೆ ಅವರು ಮಾಡಿದ ಸಾಧನೆ ಪ್ರತಿಯೊಬ್ಬ ಹೆಣ್ಣು ಮಕ್ಕಳಿಗೂ ಸ್ವಾತಂತ್ರ್ಯ, ಸ್ವಾಭಿಮಾನದ ರಹದಾರಿಯಾಗಿದೆ. ಗ್ರಾಮೀಣ ಮಹಿಳೆಯರು ಆರ್ಥಿಕವಾಗಿ ಸಬಲರಾಗಬೇಕೆಂಬ ಅವರ ಕನಸು ನನಸಾಗಲಿ ಎಂಬುದೇ ಎಲ್ಲರ ಆಶಯ.
ಪ್ರೀತಿ ಭಟ್, ಗುಣವಂತೆ