Advertisement

Bantwal: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಜೀವ ಪೂಜಾರಿಗೆ ಸಮ್ಮಾನ

10:26 AM Dec 16, 2024 | Team Udayavani |

ಬಂಟ್ವಾಳ: ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಪುರಸ್ಕೃತ ಸಹಕಾರಿ-ಸಮಾಜ ಸೇವಾ ಕ್ಷೇತ್ರದ ಸಾಧಕ ಕೆ.ಸಂಜೀವ ಪೂಜಾರಿ ಅವರಿಗೆ ಕೆ.ಸಂಜೀವ ಪೂಜಾರಿ ಅಭಿನಂದನ ಸಮಿತಿ, ಬಿ.ಸಿ.ರೋಡಿನ ದ.ಕ.ಜಿಲ್ಲಾ ಮೂರ್ತೆದಾರರ ಸಹಕಾರ ಮಹಾಮಂಡಲ, ಮೆಲ್ಕಾರಿನ ಶ್ರೀಗುರು ಕ್ರೆಡಿಟ್‌ ಕೋ-ಆಪ್‌. ಸೊಸೈಟಿ, ಶಿವಗಿರಿ ಮಹಿಳಾ ಸಹಕಾರಿ ಸಂಘ ಹಾಗೂ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಆಶ್ರಯದಲ್ಲಿ ಸಜೀಪಮೂಡ ಸುಭಾಷ್‌ನಗರ ಶ್ರೀಗುರು ಕಲ್ಯಾಣ ಮಂಟಪದಲ್ಲಿ ಹುಟ್ಟೂರ ಗೌರವ ನೀಡಿ ಸಮ್ಮಾನಿಸಲಾಯಿತು.

Advertisement

ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ನಾರಾಯಣ ಗುರುಗಳ ಆದರ್ಶದೊಂದಿಗೆ ಸಂಜೀವಣ್ಣ ಸಹಕಾರಿ ಚಳವಳಿಯಲ್ಲಿ ಸಾಧನೆ ತೋರಿದ್ದು, ಜನಪ್ರತಿನಿ ಧಿಯಾಗಿ ಸಮುದಾಯ ಏಳಿಗೆಯ ಕುರಿತು ಚಿಂತನೆ ನಡೆಸಿದವರು ಎಂದರು.

ಈ ಅಭಿನಂದನೆಯು ಪ್ರಶಸ್ತಿಗಿಂತಲೂ ಖುಷಿ ಕೊಟ್ಟಿದೆ ಎಂದು ಸಂಜೀವ ಪೂಜಾರಿ ಹೇಳಿದರು.

ಅಭಿನಂದನ ಸಮಿತಿ ಪ್ರಧಾನ ಸಂಚಾಲಕ ಕೆ.ಸಂಜೀವ ಪೂಜಾರಿ ಸುಭಾಷ್‌ನಗರ ಅಧ್ಯಕ್ಷತೆ ವಹಿಸಿದ್ದರು. ಪ್ರಾಧ್ಯಾಪಕ ಡಾ| ಯೋಗೀಶ್‌ ಕೈರೋಡಿ ಅಭಿನಂದನ ಭಾಷಣ ಮಾಡಿದರು.

ಶ್ರೀಗುರು ಕ್ರೆಡಿಟ್‌ ಕೋ-ಆಪ್‌. ಸೊಸೈಟಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್‌ ಮಾತನಾಡಿ, ಸಾಧನೆ, ಜ್ಞಾನ ಸಂಪಾದನೆಗೆ ಜಾತಿ, ವಯಸ್ಸಿನ ಮಿತಿ ಇಲ್ಲವಾಗಿದ್ದು, ಪರಿಶ್ರಮ ಹಾಗೂ ಇಚ್ಛಾಶಕ್ತಿ ಇದ್ದವರಿಗೆ ಮಾತ್ರ ಅದನ್ನು ಸಾಧಿಸಲು ಸಾಧ್ಯವಾಗುತ್ತದೆ ಎಂದರು.

Advertisement

ಜಿ.ಪಂ.ಮಾಜಿ ಉಪಾಧ್ಯಕ್ಷ ಎಂ.ತುಂಗಪ್ಪ ಬಂಗೇರ, ಬಂಟ್ವಾಳ ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ಅರುಣ್‌ ರೋಶನ್‌ ಡಿ’ಸೋಜಾ, ನೆಲ್ಯಾಡಿ ಕಾಮಧೇನು ಮ. ಸ. ಸಂಘದ ಅಧ್ಯಕ್ಷೆ ಉಷಾ ಅಂಚನ್‌ ಶುಭ ಹಾರೈಸಿದರು. ಶಿವಗಿರಿ ಮಹಿಳಾ ಸ. ಸಂಘದ ಅಧ್ಯಕ್ಷೆ ಜಯಂತಿ ವಿ.ಪೂಜಾರಿ, ಸಜೀಪಮೂಡ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ಅಧ್ಯಕ್ಷ ರಮೇಶ್‌ ಅನ್ನಪ್ಪಾಡಿ, ದ.ಕ.ಜಿಲ್ಲಾ ಮೂರ್ತೆದಾರರ ಸ.ಮ.ಉಪಾಧ್ಯಕ್ಷ ರಾಜೇಶ್‌ ಸುವರ್ಣ, ಸಜೀಪಮೂಡ ಗ್ರಾ.ಪಂ.ಅಧ್ಯಕ್ಷೆ ಶೋಭಾ ಶೆಟ್ಟಿ ಅತಿಥಿಗಳಾಗಿದ್ದರು.

ಸಮಿತಿ ಸಂಚಾಲಕ ಗಿರೀಶ್‌ಕುಮಾರ್‌ ಪೆರ್ವ ಸ್ವಾಗತಿಸಿ, ವಂದಿಸಿದರು. ದಿನೇಶ್‌ ಸುವರ್ಣ ರಾಯಿ ಕಾರ್ಯಕ್ರಮ ನಿರ್ವಹಿಸಿದರು. ಶೈಲೇಶ್‌ ಪೂಜಾರಿ ಕುಚ್ಚಿಗುಡ್ಡೆ, ಮಹೇಶ್‌ ಪೂಜಾರಿ ಪಟ್ಟುಗುಡ್ಡೆ, ಯಶವಂತ ಪೂಜಾರಿ ದೇರಾಜೆಗುತ್ತು, ತಾರಾನಾಥ ಪೂಜಾರಿ ಮರ್ತಾಜೆ, ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಮಂಗಳೂರು ಲೈವ್‌ ಮ್ಯೂಸಿಕ್‌ ಶೋರ್‌ ದಾ ಬ್ಯಾಂಡ್‌ ಅವರಿಂದ ಸಂಗೀತ ರಸಮಂಜರಿ ನಡೆಯಿತು.

Advertisement

Udayavani is now on Telegram. Click here to join our channel and stay updated with the latest news.

Next