Advertisement

ಅಮಾಯಕರನ್ನು ಕೊಂದವರಿಗೆ ರಾಜ್ಯೋತ್ಸವ ಪ್ರಶಸ್ತಿಯಾದ್ರೂ ಕೊಡಬೇಕು; ರವಿ ವಿರುದ್ಧ ಸಿದ್ದು

10:48 AM Oct 20, 2019 | Team Udayavani |

ಬೆಂಗಳೂರು: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹತ್ಯೆಯ ಆರೋಪಿಗಳಿಗೆ ಭಾರತ ರತ್ನ ಕೊಡುವುದಾದರೆ ಕುಡಿದ ಮತ್ತಿನಲ್ಲಿ ಕಾರು ಅಪಘಾತ ನಡೆಸಿ ಅಮಾಯಕರನ್ನು ಸಾಯಿಸಿದವರಿಗೆ ಕನಿಷ್ಠ ರಾಜ್ಯೋತ್ಸವ ಪ್ರಶಸ್ತಿಯನ್ನಾದರೂ ಕೊಡಬೇಕಪ್ಪಾ…ಇದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸಿಟಿ ರವಿ ವಿರುದ್ಧ ಮಾಡಿರುವ ವ್ಯಂಗ್ಯದ ಟ್ವೀಟ್!

Advertisement

ಸ್ವಾತಂತ್ರ್ಯ ಹೋರಾಟಗಾರ ವೀರ್ ಸಾವರ್ಕರ್ ಅವರಿಗೆ ಭಾರತ ರತ್ನ ಕೊಡಲು ಶಿಫಾರಸು ಮಾಡುವುದಾಗಿ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಬಿಜೆಪಿ ಘೋಷಿಸಿರುವುದು ಇದೀಗ ತೀವ್ರ ಚರ್ಚೆಗೆ ಗ್ರಾಸವಾಗಿತ್ತು.

ಅಧಿಕಾರ ಇಲ್ಲದಾಗ ಮಾನಸಿಕ ಕಾಯಿಲೆಯಿಂದ ನರಳುವವರು ಕಂಠಪೂರ್ತಿ ಕುಡಿದು ಕಾರು ಅಪಘಾತ ಮಾಡಿ ಅಮಾಯಕರನ್ನು ಸಾಯಿಸುತ್ತಾರೆ. ನಮ್ಮಂತಹವರು ರಾಜಕೀಯದ ಮಧ್ಯೆ ಬಿಡುವು ಮಾಡಿಕೊಂಡು ಇತಿಹಾಸ ಓದಿ. ಸತ್ಯ ತಿಳಿದುಕೊಂಡು ಮಾತನಾಡುತ್ತೇವೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ಸಿಟಿ ರವಿ ಕಾಲೆಳೆದಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

More
Next