Advertisement

ರಾಜ್ಯೋತ್ಸವ: ಸರಳ ಆಚರಣೆಗೆ ನಿರ್ಧಾರ

11:06 AM Oct 22, 2021 | Team Udayavani |

ಯಾದಗಿರಿ: ನ.1ರಂದು ಕನ್ನಡ ರಾಜ್ಯೋತ್ಸವ ಆಚರಣೆ ಕೋವಿಡ್‌ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ವತಿಯಿಂದ ಸರಳ ಮತ್ತು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಡಿಸಿ ಡಾ| ರಾಗಪ್ರಿಯಾ ತಿಳಿಸಿದರು.

Advertisement

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೋವಿಡ್‌ ಮೂರನೇ ಅಲೆ ಹಿನ್ನೆಲೆಯಲ್ಲಿ ಸರಳ ಹಾಗೂ ಅರ್ಥಪೂರ್ಣ ಕನ್ನಡ ರಾಜ್ಯೋತ್ಸವ ಆಚರಣೆಗೆ ಕ್ರಮ ಕೈಗೊಳ್ಳಬೇಕು ಎಂದರು.

ಕನ್ನಡ ರಾಜ್ಯೋತ್ಸವವನ್ನು ನಗರದ ಸರ್ಕಾರಿ ಪ.ಪೂ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದು, ಬೆಳಗ್ಗೆ 9 ಗಂಟೆಗೆ ಜಿಲ್ಲಾಡಳಿತ ವತಿಯಿಂದ ನಡೆಯುವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಭಾಗವಹಿಸಬೇಕು ಎಂದು ತಿಳಿಸಿದರು.

ಧ್ವಜಾರೋಹಣ ಹಿನ್ನೆಲೆಯಲ್ಲಿ ರಾಷ್ಟ್ರಗೀತೆ, ನಾಡ ಗೀತೆ, ಧ್ವಜಾರೋಹಣ ಮತ್ತು ಇತರೆ ಅಗತ್ಯ ಸಿದ್ಧತೆ ಮಾಡಿಕೊಂಡು ಅಚ್ಚುಕಟ್ಟಾಗಿ ನಿರ್ವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು. ಪೊಲೀಸ್‌ ಇಲಾಖೆ, ಅಬಕಾರಿ ಇಲಾಖೆ, ಅಗ್ನಿಶಾಮಕದಳ, ಅರಣ್ಯ ಇಲಾಖೆ ಸೇರಿದಂತೆ 4 ಕವಾಯತು ತಂಡ ರಚಿಸಬೇಕು. ಜಿಲ್ಲೆಯ ವಿವಿಧ ಇಲಾಖೆಗಳಾದ ಅರಣ್ಯ, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಪ್ರವಾಸೋದ್ಯಮ, ಆರೋಗ್ಯ, ಪೌರಾಯುಕ್ತ, ಸಾರಿಗೆ ಇಲಾಖೆಗಳಿಂದ ಸ್ತಬ್ಧ ಚಿತ್ರಗಳ ಮೆರವಣಿಗೆ ನಡೆಸಲು ಅಧಿಕಾರಿಗಳು ನೆರವಾಗಬೇಕೆಂದು ಸೂಚಿಸಿದರು.

ಇದನ್ನೂ ಓದಿ: 100 ಕೋಟಿ ಜನರಿಗೆ ಲಭಿಸಿದೆ ಲಸಿಕೆ ಲಾಭ

Advertisement

ತಾಲೂಕುಗಳಲ್ಲಿಯೂ ಆಯಾ ವ್ಯಾಪ್ತಿಯ ತಹಶೀಲ್ದಾರರು ಕನ್ನಡ ರಾಜ್ಯೋತ್ಸವವನ್ನು ತಾಲೂಕು ಆಡಳಿತ ವತಿಯಿಂದ ಕೋವಿಡ್‌ ಮಾರ್ಗಸೂಚಿಯನ್ವಯ ಆಯೋಜಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಈ ವೇಳೆ ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಸಹಾಯಕ ಆಯುಕ್ತ ಪ್ರಶಾಂತ ಹನಗಂಡಿ, ಡಿವೈಎಸ್ಪಿ ಸಂತೋಷ ಬನಹಟ್ಟಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಸಿದ್ದಪ್ಪ ಹೊಟ್ಟಿ, ವೀರಶೈವ ಸಮಾಜದ ನಗರ ಅಧ್ಯಕ್ಷ ಅಯ್ಯಣ್ಣ ಹುಂಡೇಕಾರ, ಸಮಾಜ ಕಲ್ಯಾಣ ಇಲಾಖಾಧಿಕಾರಿ ಚೆನ್ನಬಸವ ಎಸ್‌, ಅಬಕಾರಿ ಅಧಿಕಾರಿ ಫಿರೋಜಖಾನ್‌ ಕಿಲ್ಲೇದಾರ್‌, ಯಾದಗಿರಿ ತಹಶೀಲ್ದಾರ್‌ ಚೆನ್ನಮಲ್ಲಪ್ಪ ಘಂಟಿ, ಯೋಜನಾ ನಿರ್ದೇಶಕ ಶಾಆಲಂ ಹುಸೇನ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಾಘವೇಂದ್ರ ಸೇರಿದಂತೆ ಇತರೆ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next