ಬೆಂಗಳೂರು: ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ವಿಚಾರಕ್ಕೆ ಬಿಗ್ ಟ್ವಿಸ್ಟ್ ವೊಂದು ಸಿಕ್ಕಿದ್ದು, ಆ ಮೂಲಕ ಎಲ್ಲಾ ವಿವಾದಗಳಿಗೆ ತೆರೆ ಬಿದ್ದಿದೆ.
ಇಂಡಿಯನ್ ಯೂತ್ ಕಾಂಗ್ರೆಸ್ ತನ್ನ ವೆಬ್ ಸೈಟ್ ನಲ್ಲಿ ರಕ್ಷಾ ರಾಮಯ್ಯ ಅವರ ಹೆಸರನ್ನು ಯುವ ಕಾಂಗ್ರೆಸ್ ಅಧ್ಯಕ್ಷವೆಂದು ಘೋಷಿಸಿದೆ. ಈ ಮೂಲಕ ಯುವ ಕಾಂಗ್ರೆಸ್ ಅಧ್ಯಕ್ಷಗಾದಿಯ ಆಕಾಂಕ್ಷಿಯಾಗಿದ್ದ ನಲಪಾಡ್ ಗೆ ಬಿಗ್ ಶಾಕ್ ನೀಡಿದೆ.
ಇದನ್ನೂ ಓದಿ: ಕೋವಿಡ್ – ಮೃತಪಟ್ಟ ಕುಟುಂಬ ಸದಸ್ಯರಿಗೆ ಪರಿಹಾರ: 6 ವಾರಗಳಲ್ಲಿ ಮಾರ್ಗಸೂಚಿ ರೂಪಿಸಿ: ಸುಪ್ರೀಂ
ನಲಪಾಡ್ ಗೆ ಮುಂದೆ ಅಧ್ಯಕ್ಷ ಸ್ಥಾನ ಹಸ್ತಾಂತರವಾಗಲಿದೆ ಎನ್ನುವ ಚರ್ಚೆಗಳು ನಡೆಯುತ್ತಿರುವ ವೇಳೆ ಪಕ್ಷದೊಳಗೆ ಉಂಟಾಗಿದ್ದ ಗೊಂದಲಗಳಿಗೆ ಇಂಡಿಯನ್ ಯೂತ್ ಕಾಂಗ್ರೆಸ್ ತೆರೆ ಎಳೆದಿದೆ. ಬೆಂಗಳೂರಿನಲ್ಲಿ ನಿನ್ನೆ ತಡರಾತ್ರಿಯವರೆಗೂ ಡಿಕೆಶಿ ಸರಣಿ ಸಭೆ ನಡೆಸಿದ ಬೆನ್ನಲ್ಲೇ, ಮಹತ್ವದ ಘೋಷಣೆ ಹೊರಬಿದ್ದಿದೆ.
ಶ್ರೀ ರಕ್ಷ ರಾಮಯ್ಯ ಅವರು ಕೆಪಿಐಸಿಸಿ ಅಧ್ಯಕ್ಷರಾಗಿ ಉಳಿಯಲಿದ್ದಾರೆ. ಈ ಹುದ್ದೆ ಬಗ್ಗೆ ಬಹಳಷ್ಟು ಅನಧಿಕೃತ ಹಾಗೂ ಸುಳ್ಳು ಮಾಹಿತಿ ಹರಿದಾಡುತ್ತಿದೆ. ಕೆಪಿವೈಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟತೆ ಬೇಕಾದರೆ ಯೂಥ್ ಕಾಂಗ್ರೆಸ್ ವೆಬ್ ಸೈಟ್ನಲ್ಲಿ ವೀಕ್ಷಿಸಬಹುದಾಗಿದೆ. ಈ ಜಾಲದಲ್ಲಿ ನೀಡಲಾಗಿರುವ ಮಾಹಿತಿಯನ್ನು ಎಐಸಿಸಿ, ಐವೈಸಿ ಅಧ್ಯಕ್ಷರೇ ಅನುಮೋದನೆ ನೀಡಿದ್ದಾರೆ” ಎಂದು ಕಾಂಗ್ರೆಸ್ ಪಕ್ಷದಿಂದ ಅಧಿಕೃತ ಪ್ರಕಟಣೆ ಬಂದಿದೆ.