Advertisement

ರಕ್ಷಿತ್ ಶೆಟ್ಟಿ ಅಭಿನಯದ ‘777 ಚಾರ್ಲಿ’ ಚಿತ್ರದ ರಿಲೀಸ್ ದಿನಾಂಕ ಘೋಷಣೆ

12:01 PM Apr 10, 2022 | Team Udayavani |

ನಟ ರಕ್ಷಿತ್ ಶೆಟ್ಟಿ ಅಭಿನಯದ ಬಹುನಿರೀಕ್ಷಿತ ಚಿತ್ರ ‘777 ಚಾರ್ಲಿ’ ಹಲವು ಕಾರಣಗಳಿಂದ ತನ್ನ ಬಿಡುಗಡೆ ದಿನಾಂಕವನ್ನು ಮುಂದೂಡಿಕೆ ಮಾಡಿತ್ತು. ಇದೀಗ ಕೊನೆಗೂ ರಕ್ಷಿತ್ ಚಿತ್ರದ ರಿಲೀಸ್ ಡೇಟ್ ಅನೌನ್ಸ್ ಆಗಿದೆ.

Advertisement

ಹೌದು, ಜೂನ್ 10ರಂದು ‘777 ಚಾರ್ಲಿ’ ಚಿತ್ರ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಘೋಷಿಸಿದೆ. 150ಕ್ಕೂ ಹೆಚ್ಚು ದಿನಗಳ ಕಾಲ ಚಿತ್ರೀಕರಣಗೊಂಡಿದ್ದ ಸಿನಿಮಾ ಕಳೆದ ವರ್ಷದ ಡಿಸೆಂಬರ್ ನಲ್ಲಿ ತೆರೆಕಾಣಬೇಕಿತ್ತು. ಆದರೆ ಕೋವಿಡ್ ಸೇರಿದಂತೆ ಹಲವು ಕಾರಣಗಳಿಂದ ಬಿಡುಗಡೆ ದಿನಾಂಕ ಮುಂದೂಡಿಕೆಯಾಗಿತ್ತು.

‘777 ಚಾರ್ಲಿ’ ಚಿತ್ರದಲ್ಲಿ ರಕ್ಷಿತ್‌ ಶೆಟ್ಟಿ, ಚಾರ್ಲಿ ಹೆಸರಿನ ನಾಯಿ, ಸಂಗೀತಾ ಶೃಂಗೇರಿ, ರಾಜ್‌ ಬಿ ಶೆಟ್ಟಿ ಮುಖ್ಯಪಾತ್ರದಲ್ಲಿದ್ದಾರೆ. ಪರಂವಃ ಸ್ಟುಡಿಯೋ ಮೂಲಕ ರಕ್ಷಿತ್‌ ಶೆಟ್ಟಿ, ಜಿಎಸ್‌ ಗುಪ್ತ ಚಿತ್ರ ನಿರ್ಮಿಸುತ್ತಿದ್ದಾರೆ. ರಕ್ಷಿತ್ ಶೆಟ್ಟಿ ನಟನೆಯ ‘777 ಚಾರ್ಲಿ’ ಚಿತ್ರಕ್ಕೆ ಯು/ಎ ಸರ್ಟಿಫಿಕೇಟ್ ದೊರೆತಿದೆ.

ಇದನ್ನೂ ಓದಿ:ಸ್ಯಾಂಡಲ್‌ವುಡ್‌ ನಿರ್ಮಾಪಕರ ಹಿಂದಿ ಸಿನಿಮಾ; ಊರ್ವಶಿ ರೌಟೇಲಾ ನಾಯಕಿ

ಕಿರಣ್ ರಾಜ್ ನಿರ್ದೇಶನದ ‘777 ಚಾರ್ಲಿ’ ಸಿನಿಮಾ  ಹಿಂದಿ, ಮಲಯಾಳಂ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿಯೂ ಡಬ್ ಆಗಿ ಬಿಡುಗಡೆಯಾಗಲಿದೆ.

Advertisement

Advertisement

Udayavani is now on Telegram. Click here to join our channel and stay updated with the latest news.

Next