Advertisement

BJP-JDS ಪಾದಯಾತ್ರೆ ಹಿಂಪಡೆಯದಿದ್ದರೆ ರಕ್ತಕ್ರಾಂತಿ: ಕುರುಬರ ಸಂಘ ಎಚ್ಚರಿಕೆ

11:15 PM Jul 31, 2024 | Team Udayavani |

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆ ಹುದ್ದೆಯಲ್ಲಿ ಮುಂದುವರಿಯಬಾರದು ಎಂದು ಬಿಜೆಪಿ-ಜೆಡಿಎಸ್‌ ಷಡ್ಯಂತ್ರ ಮಾಡಿವೆ. ಯಾವುದೇ ಕಪ್ಪುಚುಕ್ಕೆ ಇಲ್ಲದೆ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ಅವರಿಗೆ ಮಸಿ ಬಳಿಯಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಪ್ರಯತ್ನಿಸುತ್ತಿದ್ದಾರೆ.

Advertisement

ಮುಡಾ ಅಕ್ರಮದ ವಿರುದ್ಧ ಬಿಜೆಪಿ-ಜೆಡಿಎಸ್‌ ನಡೆಸಲು ಉದ್ದೇಶಿಸಿರುವ ಪಾದಯಾತ್ರೆಯನ್ನು ಹಿಂಪಡೆಯದಿದ್ದರೆ ರಕ್ತಕ್ರಾಂತಿ ಆಗಬಹುದು ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘ ಎಚ್ಚರಿಕೆ ನೀಡಿದೆ.

ಸಂಘದ ಅಧ್ಯಕ್ಷ ಎಂ.ಈರಣ್ಣ ಹಾಗೂ ಪದಾಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಮ್ಮ ಸಮುದಾಯದ ನಾಯಕ ಸಿದ್ದರಾಮಯ್ಯ ಅವರು 40 ವರ್ಷಗಳ ಅವರ ಸುದೀರ್ಘ‌ ರಾಜಕಾರಣದಲ್ಲಿ ಒಂದೇ ಒಂದು ಕಪ್ಪು ಚುಕ್ಕೆಯಿಲ್ಲದ ಆಡಳಿತವನ್ನು ನಡೆಸಿದ್ದಾರೆ. ಅವರ ವಿರುದ್ಧ ಷಡ್ಯಂತ್ರ ನಡೆಸುತ್ತಿರುವ ವಿಪಕ್ಷಗಳ ವಿರುದ್ಧ ಕುರುಬ ಸಮುದಾಯ ಹಾಗೂ ಹಿಂದುಳಿದ ವರ್ಗಗಳ ಸಮುದಾಯದವರು ರಾಜ್ಯಾದ್ಯಂತ ಸಿಡಿದೇಳಬೇಕಾಗುತ್ತದೆ ಎಂದು ಹೇಳಿದ್ದಾರೆ.

ಈ ಹಿಂದೆಯೂ ಹಿಂದುಳಿದ ವರ್ಗಗಳ ನಾಯಕರಾದ ದೇವರಾಜು ಅರಸು, ಎಸ್‌.ಬಂಗಾರಪ್ಪ, ವೀರಪ್ಪ ಮೊಯ್ಲಿ, ಧರಂ ಸಿಂಗ್‌ ವಿರುದ್ಧ ಇಂತಹದೇ ಷಡ್ಯಂತ್ರ ರೂಪಿಸಲಾಗಿತ್ತು ಎಂದು ಅವರು ದೂರಿದರು.

Advertisement

Udayavani is now on Telegram. Click here to join our channel and stay updated with the latest news.

Next