ಯಾದಗಿರಿ: ಪರಿಶಿಷ್ಟ ಜಾತಿಗಳಿಗೆ ಜನಸಂಖ್ಯಾವಾರು ಮೀಸಲಾತಿ ಹಂಚಿಕೆ ಮಾಡಿ ನ್ಯಾ| ಎ.ಜೆ ಸದಾಶಿವ ಆಯೋಗದ ಶಿಫಾರಸುಗಳನ್ನು ಸುಪ್ರೀಂ ಕೋರ್ಟ್ ನಿರ್ದೇಶನದಂತೆ ವಿಧಾನಸಭೆ ಅಧಿವೇಶನದಲ್ಲಿ ಮಂಡಿಸಿ ಕೇಂದ್ರ ಸರ್ಕಾರಕ್ಕೆಶಿಫಾರಸು ಮಾಡಲು ಒತ್ತಾಯಿಸಿ ಮಾದಿಗ ಯುವ ಸೇನೆ ಸಮಿತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಸುಭಾಶ್ಚಂದ್ರ ಬೋಸ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಮಾದಿಗ ಯುವ ಸೇನೆಯ ಸಾವಿರಾರು ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆನಡೆಸಿದರು.
ಮಾದಿಗ ಯುವ ಸೇನೆ ಸಂಸ್ಥಾಪಕ ರಾಜ್ಯಾಧ್ಯಕ್ಷ ನಂದಕುಮಾರ ಬಾಂಬೆಕಾರ್ ಮಾತನಾಡಿ, ಕಳೆದ ಎರಡೂವರೆ ದಶಕಗಳಿಂದ ಪರಿಶಿಷ್ಟ ಜಾತಿಯಲ್ಲಿನ ಮೀಸಲಾತಿಶೇ.15ರಲ್ಲಿ ಜನಸಂಖ್ಯೆಗನುಗುಣವಾಗಿ ಒಳಮೀಸಲಾತಿ ಜಾರಿಗೆ ಹೋರಾಟ ಮಾಡುತ್ತ ಬರಲಾಗಿದೆ. ನ್ಯಾ| ಎ.ಜೆ. ಸದಾಶಿವಆಯೋಗ ರಚನೆ ಮಾಡುವಾಗ ವಿರೋಧ ಮಾಡದ ಪ್ರತಿನಿಧಿ ಗಳು, ಆಯೋಗ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿದನಂತರ ಲಂಬಾಣಿ, ಭೋವಿ ಸಮುದಾಯದಶಾಸಕರು ವರದಿ ಜಾರಿಗೆ ವಿರೋಧಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಒಳಮೀಸಲಾತಿ ಜಾರಿಗೆ ಸಂವಿಧಾನದಲ್ಲಿರುವ ಕಾನೂನುಗಳನ್ನು ತಿಳಿದುಕೊಳ್ಳದೆ ಬೇಕಾಬಿಟ್ಟಿ ಹೇಳಿಕೆ ನೀಡಿ ರಾಜ್ಯದ ಜನತೆಗೆ ತಪ್ಪು ಸಂದೇಶ ನೀಡುವುದನ್ನು ನಿಲ್ಲಿಸಬೇಕು. ಸಂವಿಧಾನದಲ್ಲಿರುವ ಅಂಶಗಳನ್ನುಒಪ್ಪಿಕೊಳ್ಳಬೇಕೆಂದು ಆಗ್ರಹಿಸಿದರು. ಮಾದಿಗ ಯುವ ಸೇನೆ ಜಿಲಾಧ್ಯಕ್ಷಬಸವರಾಜ ಹಗರಟಿಗಿ ಮಾತನಾಡಿ, ಲಂಬಾಣಿ, ಭೋವಿ ಇತರೆ ಜಾತಿಗಳನ್ನುಪರಿಶಿಷ್ಟ ಜಾತಿಯಲ್ಲಿ ಸೇರಿಸಬೇಕೆಂದು ಹಾವನೂರ ಆಯೋಗ ಸರ್ಕಾರಕ್ಕೆ ವರದಿ ಸಲ್ಲಿಸಿದಾಗ ಮಾದಿಗ ಮತ್ತು ಛಲವಾದಿ ಸಮುದಾಯದ ಮುಖಂಡರು ವಿರೋಧ ವ್ಯಕ್ತಪಡಿಸಿಲ್ಲ, ಸರ್ಕಾರದ ಯೋಜನೆಗಳ ಲಾಭವನ್ನು ಬಹುಪಾಲು ದಲಿತ ಜನಾಂಗದವರು ಪಡೆಯುತ್ತಿದ್ದಾರೆ. ಇದರಿಂದ ಮೂಲ ದಲಿತರಿಗೆ ಅನ್ಯಾಯವಾಗುತ್ತಿದ್ದು, ಕೂಡಲೇ ನ್ಯಾ| ಎ.ಜೆ. ಸದಾಶಿವ ಆಯೋಗ ವರದಿ ಜಾರಿ ಮಾಡಬೇಕೆಂದು ಒತ್ತಾಯಿಸಿದರು.
ಸುಪ್ರೀಂ ಕೋರ್ಟ್ ನಿರ್ದೇಶನದಂತೆ ನ್ಯಾ| ಎ,ಜೆ ಸದಾಶಿವ ಆಯೋಗದ ವರದಿಯನ್ನು ಸದನದಲ್ಲಿ ಮಂಡಿಸಿ ಒಮ್ಮತದ ನಿರ್ಣಯ ಕೈಗೊಂಡು ಮಾದಿಗ ಮತ್ತು ಛಲವಾದಿ ಸಮುದಾಯಗಳಿಗೆ ನ್ಯಾಯ ಒದಗಿಸಿಕೊಡಬೇಕೆಂದು ಆಗ್ರಹಿಸಿದರು. ವಾಸುದೇವ ಕಟ್ಟಿಮನಿ, ಭೀಮರಾಯಬಂದಳ್ಳಿ, ಬಸವರಾಜ ಕೋಡೆಕಲ್, ಪರಶುರಾಮ ಪರಸನಳ್ಳಿ, ಚಂದ್ರಶೇಖರದಾಸನಕೇರಿ, ಮಲ್ಲು ರಾಮಸಮುದ್ರ, ಶಿವು ಮುದ್ನಾಳ, ಬಸವರಾಜ ಹುಣಸಗಿ, ಕಾಶಪ್ಪ ಹೆಗ್ಗಣಗೇರಾ ಸೇರಿದಂತೆ ನೂರಾರು ಮುಖಂಡರು ಭಾಗವಹಿಸಿದ್ದರು.