Advertisement
ರ್ಯಾಲಿಯಲ್ಲಿ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಬೀದರ್ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಾರು ರೈತರು ಭಾಗವಹಿಸಿದ್ದರು. ತಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಸರ್ಕಾರದ ವಿರುದ್ಧ ರೈತರು ಘೋಷಣೆ ಕೂಗಿದರು.
Related Articles
Advertisement
ಈಗಾಗಲೇ ಕಬ್ಬು ಬೆಳೆಗಾರರಿಗೆ ಬಾಕಿ ಉಳಿಸಿಕೊಂಡಿರುವ ರಾಜ್ಯದ ಸುಮಾರು 25 ಸಕ್ಕರೆ ಕಾರ್ಖಾನೆಗಳಿಗೆ ಜಪ್ತಿ ಆದೇಶ ಹೊರಡಿಸಲಾಗಿದೆ. ಅವರು ಕಾನೂನು ಪ್ರಕಾರ ರೈತರಿಗೆ 14 ದಿನದೊಳಗೆ ಬಾಕಿ ಹಣ ಪಾವತಿಸಬೇಕು. ಒಂದು ವೇಳೆ ತಡಮಾಡಿದರೆ ಬಡ್ಡಿ ಸಮೇತ ಬಾಕಿ ಹಣ ನೀಡುವಂತೆ ಮಾಲೀಕರಿಗೆ ಸೂಚಿಸಿ ಎಚ್ಚರಿಕೆ ನೀಡಲಾಗಿದೆ ಎಂದು ತಿಳಿಸಿದರು.
ಶೀಘ್ರ ಕ್ರಮಕ್ಕೆ ಒತ್ತಾಯ: ಕೇಂದ್ರ ಸರ್ಕಾರ ಶೇ.10ರಷ್ಟು ಸಕ್ಕರೆ ಇಳುವರಿ ಬರುವ ಕಬ್ಬಿಗೆ 2750 ರೂ. ನಿಗದಿ ಮಾಡಿದ್ದು, ಇದನ್ನು ರಾಜ್ಯ ಸರ್ಕಾರ ತಿರಸ್ಕರಿಸಿ ಶೇ.9.5 ಇಳುವರಿಗೆ ದರ ನಿಗದಿ ಪಡಿಸಬೇಕು. ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಸಾಲಮನ್ನಾ ಪ್ರಕ್ರಿಯೆ ಶೀಘ್ರಗೊಳಿಸಬೇಕು.
ಇನ್ನು ರೈತ ಮುಖಂಡರ ಮೇಲೆ ಪೊಲೀಸ್ ಮೊಕದ್ದಮೆಗಳನ್ನು ದಾಖಲಿಸಲಾಗಿದ್ದು, ಕಳೆದ ಕಾಂಗ್ರೆಸ್ ಸರ್ಕಾರ ಮೊಕದ್ದಮೆ ವಾಪಸ್ ಪಡೆಯುವುದಾಗಿ ತಿಳಿಸಿತ್ತು. ಆದರೆ ಈವರಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸುತ್ತೇವೆ ಎಂದು ತಿಳಿಸಿದರು.