Advertisement

ಬಾಬು ಜಗಜೀವನ ರಾಂ ಜನ್ಮ ದಿನಾಚರಣೆ 

03:09 PM Apr 06, 2017 | |

ಉಡುಪಿ: ದೇಶಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟು, ದೇಶಕ್ಕೆ ಅಮೂಲ್ಯ ಕೊಡುಗೆಗಳನ್ನು ನೀಡಿದ ಮಹನೀಯರನ್ನು ಸ್ಮರಿಸುವುದು ಅಗತ್ಯ ಎಂದು ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ  ತಿಳಿಸಿದ್ದಾರೆ.

Advertisement

ಅವರು ಬುಧವಾರ ರಜತಾದ್ರಿಯ ಅಟಲ್‌ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿ.ಪಂ., ಸಮಾಜ ಕಲ್ಯಾಣ ಇಲಾಖೆ, ದಲಿತ ಸಂಘಟನೆಗಳ ಆಶ್ರಯದಲ್ಲಿ ನಡೆದ, ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ಡಾ| ಬಾಬು ಜಗಜೀವನ ರಾಂ ಅವರ 110 ನೇ ಜನ್ಮ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.  ರಾಂ ಅವರ ವ್ಯಕ್ತಿತ್ವ ಮತ್ತು ಜೀವನ ಚರಿತ್ರೆ ಕುರಿತು ಅಧ್ಯಾಪಕ ನಾರಾಯಣ ಮಣೂರು ಉಪನ್ಯಾಸ ನೀಡಿದರು.

ನಗರಸಭೆಯ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌, ಅಪರ ಜಿಲ್ಲಾಧಿಕಾರಿ ಜಿ. ಅನುರಾಧಾ, ತಹಶೀಲ್ದಾರ್‌ ಮಹೇಶ್ಚಂದ್ರ, ಜಿ.ಪಂ. ಉಪ ಕಾರ್ಯದರ್ಶಿ ನಾಗೇಶ್‌ ರಾಯ್ಕರ್‌ ಉಪಸ್ಥಿತರಿದ್ದರು. ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ರಮೇಶ್‌ ಸ್ವಾಗತಿಸಿದರು. 

Advertisement

Udayavani is now on Telegram. Click here to join our channel and stay updated with the latest news.

Next