Advertisement

Ram Janmabhoomi Trust President ನೃತ್ಯ ಗೋಪಾಲ್‌ ದಾಸ್‌ ಆರೋಗ್ಯ ಗಂಭೀರ

01:06 AM Sep 10, 2024 | Team Udayavani |

ಲಕ್ನೋ: ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಅಧ್ಯಕ್ಷ ಮಹಾಂತ್‌ ನೃತ್ಯ ಗೋಪಾಲ್‌ ದಾಸ್‌ ಅವರನ್ನು ಲಕ್ನೋದಲ್ಲಿನ ಖಾಸಗಿ ಆಸ್ಪತ್ರೆಗೆ ದಾಖ ಲಿಸಲಾಗಿದೆ. 86 ವರ್ಷದ ಅವರ ಆರೋಗ್ಯ ಸ್ಥಿತಿ ಗಂಭೀ ರ ವಾಗಿದೆ. ಮೂತ್ರನಾಳದ ತೊಂದರೆ ಮತ್ತು ಕಡಿಮೆ ಆಹಾರ ಸೇವನೆಯಿಂದಾಗಿ ಅನಾರೋಗ್ಯಕ್ಕೆ ತುತ್ತಾಗಿರುವ ಅವ ರನ್ನು ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾ ಗುತ್ತಿದೆ. ಇದಕ್ಕೂ ಮೊದಲು ಅವರನ್ನು ಗ್ವಾಲಿಯರ್‌ನಲ್ಲಿರುವ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದರೂ, ಚೇತ ರಿಕೆ ಕಾಣದ್ದರಿಂದ ಲಕ್ನೋ ಆಸ್ಪತ್ರೆಗೆ ದಾಖಲಿಸಲಾ ಗಿದೆ. ಅವರಿಗೆ ತಜ್ಞ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ ಎಂದು ಮೆಡಿಕಲ್‌ ಬುಲೆಟಿನ್‌ನಲ್ಲಿ ಹೇಳಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next