Advertisement

ನವೆಂಬರ್‌ ನಲ್ಲಿ ಅಯೋಧ್ಯೆ ರಾಮ ಮಂದಿರ ನಿರ್ಮಾಣ ಕೆಲಸ ಆರಂಭ

09:37 AM Sep 16, 2019 | keerthan |

ಹೊಸದಿಲ್ಲಿ: ಆಯೋಧ್ಯೆಯಲ್ಲಿ ಮುಂದಿನ ನವೆಂಬರ್‌ ನಲ್ಲಿ ರಾಮ ಮಂದಿರದ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದು ಭಾರತೀಯ ಜನತಾ ಪಕ್ಷದ ನಾಯಕ ಸುಬ್ರಮಣ್ಯನ್‌ ಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

Advertisement

ಸುಪ್ರೀಂ ಕೋರ್ಟ್‌ ನಲ್ಲಿ ವಿಚಾರಣೆಯ ಹಂತದಲ್ಲಿರುವ  ರಾಮ ಮಂದಿರ- ಬಾಬ್ರಿ ಮಸೀದಿ ವಿವಾದ ಪ್ರಕರಣದ ತೀರ್ಪು ರಾಮ ಮಂದಿರದ ಪರವಾಗಿ ಬರಲಿದೆ ಎಂದು ಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ಅರಾಧನೆಯ ಹಕ್ಕು ಮೂಲಭೂತ ಹಕ್ಕಾಗಿದ್ದು, ಅದನ್ನು ಯಾರಿಂದಲೂ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಅಭಿಪ್ರಾಯ ಪಟ್ಟರು.

ಶನಿವಾರ ಅಯೋಧ್ಯೆಗೆ ಭೇಟಿ ನೀಡಿದ ಸುಬ್ರಮಣ್ಯನ್‌ ಸ್ವಾಮಿ, ರಾಮನ ಜನ್ಮಸ್ಥಾನದಲ್ಲಿರುವ ಈ  ಮಂದಿರವನ್ನು ತೆಗೆದುಹಾಕಲು ಸಾಧ್ಯವಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next