ಲಕ್ನೋ(ಅಯೋಧ್ಯೆ): 500 ವರ್ಷಗಳ ಬಳಿಕ ಕೊನೆಗೂ ಅಯೋಧ್ಯೆಯಲ್ಲಿ ಮತ್ತೆ ಶ್ರೀರಾಮ ಮಂದಿರ ತಲೆಎತ್ತಿದಂತಾಗಿದ್ದು, ರಾಮಲಲ್ಲಾನ ಪ್ರಾಣಪ್ರತಿಷ್ಠೆಗೆ ಕ್ಷಣಗಣನೆ ಆರಂಭವಾಗಿದೆ. ಸೋಮವಾರ (ಜನವರಿ 22) 12-20ರಿಂದ 12-40ರೊಳಗೆ ನಡೆದ ಬಾಲರಾಮನ ಪ್ರಾಣಪ್ರತಿಷ್ಠೆ ಕಾರ್ಯವನ್ನು ಪ್ರಧಾನಿ ನರೇಂದ್ರ ಮೋದಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಸೇರಿದಂತೆ ಗಣ್ಯರು ಹಾಜರಿದ್ದರು.
ಇದನ್ನೂ ಓದಿ:Gadag: ರಾಮ ಮಂದಿರ ಚಿತ್ರ ತಿರುಚಿದ ಯುವಕ ಪೊಲೀಸ್ ವಶಕ್ಕೆ
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಯೋಧ್ಯೆಯಲ್ಲಿ ಭದ್ರತೆ ಸೇರಿದಂತೆ ಎಲ್ಲಾ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ಮಹರ್ಷಿ ವಾಲ್ಮೀಕಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ನಂತರ ಹೆಲಿಕ್ಯಾಪ್ಟರ್ ಮೂಲಕ ಅಯೋಧ್ಯೆಗೆ ಆಗಮಿಸಿದ್ದಾರೆ.
ನಂತರ ರಾಮಮಂದಿರದಲ್ಲಿ 11ಗಂಟೆಯಿಂದ 12ಗಂಟೆವರೆಗೆ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದು, ತದನಂತರ ಪ್ರಾಣಪ್ರತಿಷ್ಠೆ ಕಾರ್ಯಕ್ಕೆ ಕೈಜೋಡಿಸಿದ್ದರು.
1ಗಂಟೆಯ ಬಳಿಕ ಪ್ರಧಾನಿ ಮೋದಿ ಅವರು ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ವರದಿ ತಿಳಿಸಿದೆ.
ಇಡೀ ಅಯೋಧ್ಯೆ ನಗರಿ ಹೂವು, ಬೆಳಕಿನಿಂದ ಅಲಂಕೃತ:
ಐತಿಹಾಸಿಕ ದಿನಕ್ಕೆ ಸಾಕ್ಷಿಯಾಗಿರುವ ಅಯೋಧ್ಯೆ ನಗರಿ ಸಂಪೂರ್ಣವಾಗಿ ಸಾವಿರಾರು ಕ್ವಿಂಟಾಲ್ ಹೂಗಳಿಂದ ಅಲಂಕೃತಗೊಂಡಿದೆ. ಅಯೋಧ್ಯೆ ಸೇರಿದಂತೆ ದೇಶಾದ್ಯಂತ ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಮ ಮಂತ್ರ ಮೊಳಗುತ್ತಿದೆ.