Advertisement

Hubli; ರಾಮ ಮಂದಿರ ವಿಚಾರವನ್ನು ರಾಜಕೀಯಕ್ಕೆ ಬಳಸುವುದಿಲ್ಲ: ಪ್ರಹ್ಲಾದ್ ಜೋಶಿ

02:58 PM Dec 30, 2023 | Team Udayavani |

ಹುಬ್ಬಳ್ಳಿ: ಶ್ರೀರಾಮ ಮಂದಿರ ವಿಚಾರವನ್ನು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ನಾವು ಯಾರೂ ರಾಜಕೀಯಕ್ಕೆ ಬಳಸಿಕೊಳ್ಳುವುದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು.

Advertisement

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀರಾಮ ಮಂದಿರ ಉದ್ಘಾಟನಾ ಸಮಾರಂಭಕ್ಕೆ ಕಾಂಗ್ರೆಸ್ ನವರಿಗೂ ಆಹ್ವಾನ ನೀಡಲಾಗಿದೆ ಎಂದರು.

ಬಾಬ್ರಿ ಮಸೀದಿ ವಿಚಾರ ಇದೀಗ ಮುಗಿದ ಅಧ್ಯಾಯವಾಗಿದೆ. ಶ್ರೀರಾಮನ ಅಸ್ತಿತ್ವವನ್ನೇ ಪ್ರಶ್ನಿಸಿದ್ದ ಯುಪಿಎ ಮೈತ್ರಿಕೂಟದವರು, ಶ್ರೀರಾಮ ಮಂದಿರ ವಿಚಾರವನ್ನು ಮತ ಬ್ಯಾಂಕ್ ಕಾರಣಕ್ಕೆ ರಾಜಕೀಕರಣಗೊಳಿಸುತ್ತಾರೆ ಎಂದರು.

ರಾಜ್ಯದಲ್ಲಿ ಸರ್ಕಾರ ಹಾಗೂ ಮುಖ್ಯಮಂತ್ರಿ ವಿರುದ್ಧ ಮಾತನಾಡಿದವರಿಗೆ ವಿಶೇಷ ಸ್ಥಾನ ಸಿಗುವಂತಹ ಸ್ಥಿತಿ ಕಾಂಗ್ರೆಸ್ ನಲ್ಲಿ ನಿರ್ಮಾಣವಾಗಿದೆ ಎಂದು ವ್ಯಂಗ್ಯವಾಡಿದರು.

ಕಾಂಗ್ರೆಸ್ ನ ಮೂವರು ಹಿರಿಯ ಶಾಸಕರಿಗೆ ವಿಶೇಷ ಸ್ಥಾನ ನೀಡಿದ ಬಗ್ಗೆ ಪ್ರತಿಕ್ರಿಯಿಸಿದ ಅವರು, ತಮ್ಮ ವಿರುದ್ಧ ಮಾತನಾಡಿದವರಿಗೆ ವಿಶೇಷ ಸ್ಥಾನ ಲಭಿಸುತ್ತದೆ ಎಂಬುದನ್ನು ಸಿಎಂ ಸಿದ್ದರಾಮಯ್ಯ ಸಾಬೀತುಪಡಿಸಿದ್ದಾರೆ ಎಂದು ಲೇವಡಿ ಮಾಡಿದರು.

Advertisement

ಬಿಜೆಪಿಯಲ್ಲಿ ಯಾರೇ ಆಗಲಿ ಪಕ್ಷದ ವಿರುದ್ಧ ಬಹಿರಂಗ ಹೇಳಿಕೆಗಳನ್ನು ನೀಡುವುದು ಸರಿಯಲ್ಲ ಎಂದು ಪರೋಕ್ಷವಾಗಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಪಕ್ಷದ ವಿರುದ್ಧ ಹೇಳಿಕೆ ನೀಡುವುದನ್ನು ಕೂಡಲೇ ನಿಲ್ಲಿಸಬೇಕು ಎಂದರಲ್ಲದೆ, ಯತ್ನಾಳ್ ಹೇಳಿಕೆಯಿಂದ ಪಕ್ಷಕ್ಕೆ ಆಗಿರುವ ಡ್ಯಾಮೇಜ್ ಕುರಿತಾಗಿ ಪ್ರತಿಕ್ರಿಯಿಸಲು ನಿರಾಕರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next