Advertisement

Ram Mandir; ಜ 22 ರಂದು ಸಾರ್ವತ್ರಿಕ ರಜೆ ಘೋಷಿಸಲು ಸಿಎಂಗೆ ಯಶ್ ಪಾಲ್ ಪತ್ರ

05:21 PM Jan 01, 2024 | Team Udayavani |

ಉಡುಪಿ: ಜನವರಿ 22 ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಪತ್ರ ಬರೆದಿದ್ದಾರೆ.

Advertisement

ಸಮಸ್ತ ಹಿಂದೂಗಳ ಶ್ರದ್ಧಾ ಕೇಂದ್ರವಾಗಿ 500 ವರ್ಷಗಳ ಕನಸು ನನಸಾಗುವ ಸಮಸ್ತ ಭಾರತೀಯರ ಪಾಲಿಗೆ ಅತ್ಯಂತ ಪವಿತ್ರ ದಿನವಾಗಿ ಅಯೋಧ್ಯೆ ಶ್ರೀ ರಾಮ ಮಂದಿರದ ಲೋಕಾರ್ಪಣೆಯ ಭಾವನಾತ್ಮಕ ಐತಿಹಾಸಿಕ ಕ್ಷಣವನ್ನು ಮನೆ ಮನಗಳಲ್ಲಿ ಆಚರಿಸಲು ವಿಶೇಷ ದಿನದಂದು ದೇಶದಾದ್ಯಂತ ಹಲವು ದೇವಸ್ಥಾನ, ಮಂದಿರ ಹಾಗೂ ಸಂಘ ಸಂಸ್ಥೆಗಳಲ್ಲಿ ವಿಶೇಷ ಪೂಜೆ, ಭಜನಾ ಸಂಕೀರ್ತನೆ, ಅನ್ನ ಸಂತರ್ಪಣೆಯ ಮೂಲಕ ಅತ್ಯಂತ ಸಂಭ್ರಮ ಸಡಗರದಿಂದ ಅಚರಿಸುತ್ತಿದ್ದು, ರಾಜ್ಯ ಸರಕಾರ ಜನವರಿ 22 ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡಿ ಪವಿತ್ರ ದಿನವನ್ನು ಸಂಭ್ರಮದಿಂದ ಆಚರಿಸಲು ರಾಜ್ಯದ ಜನತೆಗೆ ಅವಕಾಶ ಕಲ್ಪಿಸುವಂತೆ ಈ ಮೂಲಕ ಮನವಿ ಮಾಡುತ್ತಿದ್ದೇನೆ” ಎಂದು ಯಶ್ ಪಾಲ್ ಸುವರ್ಣ ಅವರು ಪತ್ರದ ಪ್ರತಿಯನ್ನು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next