ನವದೆಹಲಿ:ದೇಶದ 14ನೇ ರಾಷ್ಟ್ರಪತಿಯಾಗಿ ರಾಮನಾಥ ಕೋವಿಂದ್ ಅವರು ಮಂಗಳವಾರ ಪ್ರಮಾಣವಚನ ಸ್ವೀಕರಿಸಿದರು. ಸಂಸತ್ ಭವನದ ಸೆಂಟ್ರಲ್ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಖೇಹರ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.
ರಾಷ್ಟ್ರಪತಿ ಭವನದ ಮುಂದೆ ಹಾಲಿ ಮತ್ತು ನಿಯೋಜಿತ ರಾಷ್ಟ್ರಪತಿಗಳಿಗೆ ರಾಷ್ಟ್ರಪತಿಗಳ ಬೆಂಗಾವಲು ಪಡೆಯಿಂದ ಗೌರವ ರಕ್ಷೆ ನೀಡಲಾಯಿತು.
ಪದಗ್ರಹಣ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ,ಉಪರಾಷ್ಟ್ರಪತಿ ಹಮೀದ್ ಅನ್ಸಾರಿ, ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಎಚ್.ಡಿ.ದೇವೇಗೌಡ,ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕೇಂದ್ರ ಸಚಿವರಾದ ರವಿಶಂಕರ್ ಪ್ರಸಾದ್, ನಿತಿನ್ ಗಡ್ಕರಿ, ಅನಂತ್ ಕುಮಾರ್ , ಸಂಸದರು, ಮುಖ್ಯಮಂತ್ರಿಗಳು, ಶಾಸಕರು ಭಾಗಿಯಾಗಿದ್ದರು.
ಡಿಜಿಟಲ್ ಇಂಡಿಯಾ ಭಾರತದ ಪ್ರಗತಿಗೆ ಪೂರಕ: ಕೋವಿಂದ್
ನಮ್ಮ ದೇಶದಲ್ಲಿ ಸರ್ವ ಧರ್ಮ ಸಮಾನತೆ ಇದೆ. ಅತ್ಯಂತ ವಿನಮ್ರತೆಯಿಂದ ಈ ಹುದ್ದೆಯನ್ನು ನಿಭಾಯಿಸುತ್ತೇನೆ. ಇನ್ನೊಬ್ಬರು ಭಾವನೆ ಗೌರವಿಸುವುದು ಪ್ರಜಾತಂತ್ರದ ವಿಶೇಷತೆ. ವಿಭಿನ್ನತೆ ನಡುವೆಯೂ ಏಕತೆ ನಮ್ಮ ದೇಶದ ವಿಶೇಷತೆಯಾಗಿದೆ. ಡಿಜಿಟಲ್ ಇಂಡಿಯಾ ಭಾರತದ ಪ್ರಗತಿಯಗೆ ಪೂರಕವಾಗಲಿದೆ ಎಂದು 14ನೇ ರಾಷ್ಟ್ರಪತಿಯಾಗಿ ರಾಮನಾಥ ಕೋವಿಂದ್ ಅವರು ಪ್ರಮಾಣವಚನ ಸ್ವೀಕರಿಸಿದ ಬಳಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಇಡೀ ಜಗತ್ತು ಭಾರತೀಯ ಸಂಸ್ಕೃತಿಯತ್ತ ತಿರುಗಿ ನೋಡುತ್ತಿದೆ. ನನ್ನನ್ನು ರಾಷ್ಟ್ರಪತಿಯಾಗಿ ಆಯ್ಕೆ ಮಾಡಿದ್ದಕ್ಕೆ ನಿಮಗೆ ಅಭಾರಿಯಾಗಿದ್ದೇನೆ.