Advertisement
ತಿಥಿ :ಚೈತ್ರ ಶುಕ್ಲ ನವಮಿಶ್ರೀವಿಷ್ಣುವಿನ ಏಳನೆಯ ಅವತಾರನಾದ ಶ್ರೀರಾಮನ ಜನ್ಮ ಪ್ರೀತ್ಯರ್ಥವಾಗಿ ಶ್ರೀರಾಮ ನವಮಿಯನ್ನು ಆಚರಿಸುತ್ತಾರೆ. ಈ ದಿನ ಪುಷ್ಯ ನಕ್ಷತ್ರದಲ್ಲಿ, ಮಧ್ಯಾಹ್ನದಲ್ಲಿ, ಕರ್ಕ ಲಗ್ನದಲ್ಲಿ ಸೂರ್ಯಾದಿ ಐದು ಗ್ರಹಗಳಿದ್ದಾಗ ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನ ಜನ್ಮವಾಯಿತು.
Related Articles
Advertisement
ಉತ್ಸವವನ್ನು ಆಚರಿಸುವ ಪದ್ಧತಿ: ಅನೇಕ ರಾಮ ಮಂದಿರಗಳಲ್ಲಿ ಚೈತ್ರ ಶುಕ್ಲ ಪ್ರತಿ ಪದೆಯಿಂದ ಒಂಭತ್ತು ದಿನಗಳ ಕಾಲ ಈ ಉತ್ಸವವು ನಡೆಯುತ್ತದೆ. ರಾಮಾಯಣದ ಪಾರಾಯಣ, ಹರಿಕಥೆ ಮತ್ತು ರಾಮನ ಮೂರ್ತಿಗೆ ವಿವಿಧ ಶೃಂಗಾರ ಮುಂತಾದವುಗಳೊಂದಿಗೆ ಈ ಉತ್ಸವವನ್ನು ಆಚರಿಸುತ್ತಾರೆ. ನವಮಿಯಂದು ಮಧ್ಯಾಹ್ನ ರಾಮಜನ್ಮದ ಕೀರ್ತನೆ (ಹರಿಕಥೆ) ಯಾಗುತ್ತದೆ. ಮಧ್ಯಾಹ್ನ ಕುಂಚಿಗೆ (ಮಗುವಿನ ತಲೆಗೆ ಕಟ್ಟುವ ಒಂದು ವಸ್ತ್ರ. ಈ ವಸ್ತ್ರವು ಬೆನ್ನಿನವರೆಗೆ ಇರುತ್ತದೆ.) ಹಾಕಿದ ತೆಂಗಿನಕಾಯಿಯನ್ನು ತೊಟ್ಟಿಲಿನಲ್ಲಿಟ್ಟು ತೂಗುತ್ತಾರೆ. ಭಕ್ತರು ಅದರ ಮೇಲೆ, ಗುಲಾಲು ಮತ್ತು ಹೂವುಗಳನ್ನು ಅರ್ಪಿಸುತ್ತಾರೆ.’ (ಕೆಲವು ಕಡೆಗಳಲ್ಲಿ ತೆಂಗಿನ ಕಾಯಿಯ ಬದಲು ಶ್ರೀರಾಮನ ಮೂರ್ತಿಯನ್ನು ತೊಟ್ಟಿಲಿನಲ್ಲಿ ಇಡುತ್ತಾರೆ. ) ಈ ಸಂದರ್ಭದಲ್ಲಿ ಶ್ರೀರಾಮನ ಜನ್ಮದ ಗೀತೆಯನ್ನು ಹೇಳಲಾಗುತ್ತದೆ. ಅದರ ಅನಂತರ ಶ್ರೀರಾಮನ ಮೂರ್ತಿಯನ್ನು ಪೂಜಿಸುತ್ತಾರೆ ಮತ್ತು ಪ್ರಸಾದವೆಂದು ಶುಂಠಿ ಚೂರ್ಣವನ್ನು ಕೊಡುತ್ತಾರೆ. ಕೆಲವು ಕಡೆಗಳಲ್ಲಿ ಶುಂಠಿ ಚೂರ್ಣದೊಂದಿಗೆ ಮಹಾ ಪ್ರಸಾದವನ್ನೂ ನೀಡುತ್ತಾರೆ.
ರಾಮನವಮಿಯ ಮಹತ್ವ: ತ್ರೇತಾಯುಗದಲ್ಲಿ ರಾಮನ ಜನ್ಮವಾದಾಗ ಕಾರ್ಯ ನಿರತವಾಗಿದ್ದ ಶ್ರೀವಿಷ್ಣುವಿನ ಸಂಕಲ್ಪ, ತ್ರೇತಾಯುಗದಲ್ಲಿನ ಅಯೋಧ್ಯಾವಾಸಿಗಳ ಭಕ್ತಿ ಭಾವ ಮತ್ತು ಪೃಥ್ವಿಯಲ್ಲಿನ ಸಾತ್ವಿಕ ವಾತಾವರಣದಿಂದಾಗಿ ಪ್ರಭು ಶ್ರೀ ರಾಮನ ಜನ್ಮದಿಂದ ಶೇ. 100ರಷ್ಟು ಪರಿಣಾಮವಾಗಿತ್ತು. ಅನಂತರ ಪ್ರತಿವರ್ಷ ಬರುವಂತಹ ಚೈತ್ರ ಶುಕ್ಲ ನವಮಿಗೆ ಬ್ರಹ್ಮಾಂಡದಲ್ಲಿನ ವಾತಾವರಣದಲ್ಲಿ ರಾಮತತ್ವವು ಪ್ರಕ್ಷೇಪಿಸಿ ವಾತಾವರಣವನ್ನು ಸಾತ್ವಿಕ ಮತ್ತು ಚೈತನ್ಯಮಯ ವನ್ನಾಗಿಸಲು ವಿಷ್ಣುಲೋಕದಿಂದ ಶ್ರೀರಾಮ ತಣ್ತೀಯುಕ್ತ ವಿಷ್ಣು ತಣ್ತೀವು ಭೂಲೋಕದ ದಿಕ್ಕಿನತ್ತ ಪ್ರಕ್ಷೇಪಿತವಾಗುತ್ತದೆ ಮತ್ತು ಆ ದಿನ ಶ್ರೀರಾಮನ ಅಂಶಾತ್ಮಕ ಜನ್ಮವಾಗುತ್ತದೆ.
ಇದರ ಪರಿಣಾಮ ಇಡೀ ವರ್ಷವಿದ್ದು ಬ್ರಹ್ಮಾಂಡದಲ್ಲಿ ರಾಮ ತತ್ವಯುಕ್ತ ಸಾತ್ವಿಕತೆ ಮತ್ತು ಚೈತನ್ಯದ ಪ್ರಕ್ಷೇಪಣೆಯಾಗುತ್ತದೆ. ರಾಮ ತತ್ವಯುಕ್ತ ಸಾತ್ವಿಕತೆ ಮತ್ತು ಚೈತನ್ಯವನ್ನು ಬ್ರಹ್ಮಾಂಡದಲ್ಲಿನ ಪ್ರತಿಯೊಂದು ಸಜೀವ ಮತ್ತು ನಿರ್ಜೀವ ವಸ್ತುಗಳು ಗ್ರಹಿಸಿಕೊಳ್ಳುತ್ತವೆ ಮತ್ತು ಅದರಿಂದ ಅವುಗಳಿಗೆ ತಮ್ಮ ಕಾರ್ಯವನ್ನು ಒಳ್ಳೆಯ ರೀತಿಯಿಂದ ಮಾಡಲು ಸಾಧ್ಯವಾಗುತ್ತದೆ.
– ವಿನೋದ ಕಾಮತ