Advertisement

ರಾಮನವಮಿ ಗಲಾಟೆ: ಸಹಜ ಸ್ಥಿತಿಗೆ ಮರಳಿದ ರಾಜ್ಯಗಳು

10:05 PM Apr 01, 2023 | Team Udayavani |

ನವದೆಹಲಿ: ರಾಮನವಮಿಯಂದು ಹಿಂಸಾಚಾರಕ್ಕೆ ಸಾಕ್ಷಿಯಾದ ರಾಜ್ಯಗಳು ಶನಿವಾರ ಸಹಜ ಸ್ಥಿತಿಗೆ ಬಂದಿದ್ದು, ಪರಿಸ್ಥಿತಿ ಶಾಂತವಾಗಿದೆ. ಗಲಭೆ ಪೀಡಿತ ಪಶ್ಚಿಮ ಬಂಗಾಳದ ಹೌರಾದಲ್ಲಿ ಡ್ರೋನ್‌ಗಳ ಮೂಲಕ ಕಣ್ಗಾವಲು ಇಡಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್ ಏರ್ಪಡಿಸಲಾಗಿದೆ.

Advertisement

ಬಿಹಾರದ ಸಸಾರಾಂನಲ್ಲಿ ಶನಿವಾರವೂ ನಿಷೇಧಾಜ್ಞೆ ಮುಂದುವರಿದಿದ್ದು, ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಕೋಮುಗಲಭೆ ಹಿನ್ನೆಲೆಯಲ್ಲಿ 45 ಮಂದಿಯನ್ನು ಬಂಧಿಸಲಾಗಿದೆ. ಸೆಕ್ಷನ್‌ 144 ಜಾರಿಯಾಗಿರುವ ಕಾರಣ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಬಿಹಾರ ಭೇಟಿ ರದ್ದಾಗಿದೆ.

ಹಿಂಸಾಚಾರದ ಬಗ್ಗೆ ಪ್ರತಿಕ್ರಿಯಿಸಿರುವ ಬಿಹಾರ ಸಿಎಂ ನಿತೀಶ್‌ ಕುಮಾರ್‌, ಇದು ಸಹಜವಾಗಿ ನಡೆದ ಗಲಭೆಯಲ್ಲ. ರಾಜಕೀಯ ಪ್ರೇರಿತ ಹಿಂಸಾಚಾರ ಎಂದು ಹೇಳಿದ್ದಾರೆ.

ಇದೇ ವೇಳೆ, ಉತ್ತರಪ್ರದೇಶದ ಮಥುರಾದಲ್ಲಿ ಜಾಮಾ ಮಸೀದಿಯ ಮುಂಭಾಗದಲ್ಲಿ ಕೇಸರಿ ಬಾವುಟ ಹಾರಿಸಿದ ವಿಡಿಯೋ ಬಹಿರಂಗವಾಗುತ್ತಿದ್ದಂತೆ, ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next