Advertisement
ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ 20 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಶನಿವಾರ ಹರಿಯಾಣದ ರೋಹ್ಟಕ್ ಜಿಲ್ಲೆಯ ಸುನಾರಿಯಾ ಜೈಲಿನಿಂದ 40 ದಿನಗಳ ಪೆರೋಲ್ ಪಡೆದು ಹೊರಬಂದರು. ಅಲ್ಲಿಮದ ಉತ್ತರ ಪ್ರದೇಶದ ಬಾಗ್ಪತ್ನಲ್ಲಿರುವ ಅವರ ಬರ್ನಾವಾ ಆಶ್ರಮಕ್ಕೆ ಆಗಮಿಸಿದರು. ರಾಮ್ ರಹೀಮ್ ಅವರು ಬೃಹತ್ ಕೇಕ್ ನೊಂದಿಗೆ ಸಂಭ್ರಮಾಚರಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
Related Articles
Advertisement
ಕಳೆದ 14 ತಿಂಗಳಲ್ಲಿ ಇದು ನಾಲ್ಕನೇ ಬಾರಿ ಮತ್ತು ಮೂರು ತಿಂಗಳೊಳಗೆ ಎರಡನೇ ಬಾರಿಗೆ ರಾಮ್ ರಹೀಮ್ಗೆ ಪೆರೋಲ್ ನೀಡಲಾಗಿದೆ. ಇದಕ್ಕೂ ಮೊದಲು, ಹರಿಯಾಣ ಪಂಚಾಯತ್ ಚುನಾವಣೆ ಮತ್ತು ಆದಂಪುರ ವಿಧಾನಸಭಾ ಉಪಚುನಾವಣೆಗೆ ಮುಂಚಿತವಾಗಿ ಅವರನ್ನು ಅಕ್ಟೋಬರ್ 2022 ರಲ್ಲಿ 40 ದಿನಗಳ ಕಾಲ ಪೆರೋಲ್ ಮೇಲೆ ಬಿಡುಗಡೆ ಮಾಡಲಾಗಿತ್ತು.