ಹೊಸದಿಲ್ಲಿ: ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಎಕನಾಮಿಕ್ ಟೈಮ್ಸ್ ವರದಿ ಮಾಡಿದೆ.
ಶ್ವಾಸಕೋಶ ಮತ್ತು ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದ ರಾಮ್ ವಿಲಾಸ್ ಪಾಸ್ವಾನ್ ಅವರು ರವಿವಾರ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.
ಸಚಿವ ಪಾಸ್ವಾನ್ ಅವರಿಗೆ ಈ ಮೊದಲೇ ಹೃದಯ ಸಂಬಂಧಿ ತೊಂದರೆಗಳು ಕಾಣಿಸಿಕೊಂಡಿದ್ದವು. 2017ರಲ್ಲಿ ಲಂಡನ್ ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಪಾಸ್ವಾನ್, ಇದಕ್ಕೂ ಮೊದಲು ಆ್ಯಂಜಿಯೋಪ್ಲಾಸ್ಟಿ ಗೆ ಒಳಗಾಗಿದ್ದರು.
ಇದನ್ನೂ ಓದಿ: ‘ತಪ್ಪು ಮಾಹಿತಿಯಿಂದ ಟ್ವೀಟ್ ಮಾಡಿದ್ದೆ’: ವಿವಾದವಾಗುತ್ತಿದ್ದಂತೆ ಉಲ್ಟಾ ಹೊಡೆದ ಕಪಿಲ್ ಸಿಬಲ್
ರಾಮ್ ವಿಲಾಸ್ ಪಾಸ್ವಾನ್ ಅವರು ಕಳೆದ 32 ವರ್ಷಗಳಲ್ಲಿ ಹನ್ನೊಂದು ಚುನಾವಣೆಗಳಲ್ಲಿ ಸ್ಪರ್ಧಿಸಿದ್ದಾರೆ. ಅದರಲ್ಲಿ ಒಂಬತ್ತು ಬಾರಿ ಜಯಿಸಿದ್ದು, ಆರು ಪ್ರಧಾನಿಗಳ ಜೊತೆಗೆ ಕೆಲಸ ಮಾಡಿದ್ದಾರೆ.