Advertisement

ಸಕಲ ಸರಕಾರಿ ಗೌರವಗಳೊಂದಿಗೆ ರಾಮ ಭಟ್ಟರ ಅಂತಿಮ ಯಾತ್ರೆ

01:16 PM Dec 07, 2021 | Team Udayavani |

ಪುತ್ತೂರು: ಡಿ.6ರಂದು ಸಂಜೆ ವಿಧಿವಶರಾದ ಮಾಜಿ ಶಾಸಕ ಉರಿಮಜಲು ರಾಮ ಭಟ್ಟ ಅವರ ಪಾರ್ಥಿವ ಶರೀರದ ಅಂತಿಮ ಯಾತ್ರೆ ಸಾವಿರಾರು ಅಭಿಮಾನಿಗಳ, ಕಾರ್ಯಕರ್ತರ ಸಮ್ಮುಖದಲ್ಲಿ ನಡೆಯಿತು. ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್  ಅವಣರದಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ಕಾರ್ಯಕ್ರಮ ನಡೆಯಿತು.

Advertisement

ಬೆಳಿಗ್ಗೆ ರಾಮ ಭಟ್ಟ ಅವರ ಕೊಂಬೆಟ್ಟು ಮನೆಯಲ್ಲಿ ಅಂತಿಮ ಯಾತ್ರೆಯ ಸಿದ್ಧತೆಯ ಬಳಿಕ ನೆಹರುನಗರ ವಿವೇಕಾನಂದ ಪದವಿ ಕಾಲೇಜು ಮತ್ತು ಇಂಜಿನಿಯರಿಂಗ್ ಕಾಲೇಜಿಗೆ ಮೆರವಣಿಗೆ ಮೂಲಕ ರಾಮಭಟ್ಟ ಅವರ ಪಾರ್ಥಿವ ಶರೀರವನ್ನು ಕೊಂಡೊಯ್ದು ಅಲ್ಲಿ ನುಡಿನಮನ ಸಲ್ಲಿಸಲಾಯಿತು.

ಇದನ್ನೂ ಓದಿ:- ಒಂದು ಮತಕ್ಕೆ 50 ಸಾವಿರ ಆಮಿಷ: ಪರಿಷತ್ ಕಣದಲ್ಲಿ ಕಾಂಚಾಣದ ಕಾರುಬಾರು ಜೋರು; ವಿಡಿಯೋ ವೈರಲ್

ಅಲ್ಲಿಂದ ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ಆವರಣದಲ್ಲಿ ಸಾರ್ವಜನಿಕ ದರುಶನಕ್ಕೆ ಅವಕಾಶ ಕಲ್ಪಿಸಿಕೊಡಲಾಯಿತು. ಇದೇ ಸಂದರ್ಭದಲ್ಲಿ ಸರಕಾರಿ ಗೌರವ ನೀಡಲಾಯಿತು. ಬಳಿಕ ಚಿಕ್ಕಪುತ್ತೂರು ಮಡಿವಾಳಕಟ್ಟೆಯಲ್ಲಿ ಶಾಸ್ತ್ರೋಕ್ತವಾಗಿ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next