Advertisement

ರಾಜ್ಯಾದ್ಯಂತ ನಾಳೆ ರಂಜಾನ್‌

07:29 AM May 24, 2020 | Lakshmi GovindaRaj |

ಬೆಂಗಳೂರು: ಕರಾವಳಿ ಜಿಲ್ಲೆಗಳು ಹೊರತುಪಡಿಸಿ ರಾಜ್ಯಾದ್ಯಂತ ಸೋಮವಾರ (ಮೇ 25) ಈದುಲ್‌ ಫಿತ್ರ(ಪವಿತ್ರ ರಂಜಾನ್‌ ಹಬ್ಬ) ಆಚರಿಸಲಾಗುವುದು ಎಂದು ಕೇಂದ್ರೀಯ ಚಂದ್ರದರ್ಶನ ಸಮಿತಿ ಪ್ರಕಟಿಸಿದೆ.  ಈ ಕುರಿತು ಕರ್ನಾಟಕ  ರಾಜ್ಯ ವಕ್ಫ್ ಮಂಡಳಿಯ ಕೇಂದ್ರ ಕಚೇರಿಯಲ್ಲಿ ಅಮೀರೆ ಷರಿಯತ್‌ ಹಾಗೂ ಕೇಂದ್ರೀಯ ಚಂದ್ರದರ್ಶನ ಸಮಿತಿಯ ಸಂಚಾಲಕ ಸಗೀರ್‌ ಅಹ್ಮದ್‌ ರಶಾದಿಯವರ ಅಧ್ಯಕ್ಷತೆಯಲ್ಲಿ ಶನಿವಾರ ಸಂಜೆ ನಡೆದ ಸಭೆಯಲ್ಲಿ ಒಮ್ಮತದ ತೀರ್ಮಾನ ತೆಗೆದುಕೊಳ್ಳಲಾಗಿದೆ.

Advertisement

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಸೌದಿ ಅರೇಬಿಯಾ ಹಾಗೂಕೇರಳದ ಚಂದ್ರಮಾನ ಅವಧಿ ಆಧರಿಸಿ ಭಾನುವಾರ  ರಂಜಾನ್‌ ಹಬ್ಬ ಆಚರಣೆಗೆ ಅಲ್ಲಿನ ಖಾಝಿಗಳುತೀರ್ಮಾನಿಸಿದ್ದಾರೆ.   ಎರಡು ಜಿಲ್ಲೆಗಳು ಹೊರತುಪಡಿಸಿ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಸೋಮವಾರ ರಂಜಾನ್‌ ಹಬ್ಬದ ಆಚರಣೆ ನಡೆಯಲಿದೆ ಎಂದು ಸಮಿತಿಯ ಸದಸ್ಯ ಮೌಲಾನ ಮಕ್ಸೂದ್‌ ಇಮ್ರಾನ್‌ ರಶಾದಿ “ಉದಯವಾಣಿ’ಗೆ ತಿಳಿಸಿದ್ದಾರೆ.

ಸಮಿತಿಯ ಮನವಿ: ಕೊರೊನಾ ಹರಡುವುದನ್ನು ತಡೆಗಟ್ಟಲು ದೇಶಾದ್ಯಂತ ಲಾಕ್‌ಡೌನ್‌ ಜಾರಿಯ ಲ್ಲಿದೆ. ಇಂತಹ ಸಂದರ್ಭದಲ್ಲಿ ಲಾಕ್‌ಡೌನ್‌ ನಿಯ ಮಗಳು ಮತ್ತು ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು  ಸರಳ ರೀತಿಯಲ್ಲಿ ಹಬ್ಬ ಆಚರಿಸಬೇಕು. ಈದ್ಗಾ, ಮಸೀದಿಗಳಲ್ಲಿ ಹಬ್ಬದ ಸಾಮೂಹಿಕ ಪ್ರಾರ್ಥನೆಗೆ ಅವಕಾಶವಿಲ್ಲ. ಹಬ್ಬದ ಶುಭಾಶಯಗಳನ್ನು ಕೋರುವ ವಿಚಾರದಲ್ಲಿ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಪ್ರತಿಯೊಬ್ಬರೂ  ಕಡ್ಡಾಯವಾಗಿ ಪಾಲಿಸಬೇಕೆಂದು ಸಮಿತಿ ಮನವಿ ಮಾಡಿದೆ.

Advertisement

Udayavani is now on Telegram. Click here to join our channel and stay updated with the latest news.

Next