Advertisement

Ramakunja: ರಸ್ತೆ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿ ಸಾವು

09:54 PM Mar 06, 2024 | Team Udayavani |

ಕಡಬ: ರಾಮಕುಂಜ ಗ್ರಾಮದ ಗೋಳಿತ್ತಡಿ ಸಮೀಪ ಮಾ. 4ರಂದು ರಾತ್ರಿ ಬೈಕ್‌ ಹಾಗೂ ಮಿನಿ ಗೂಡ್ಸ್‌ ವಾಹನದ ನಡುವೆ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಸಂಭವಿಸಿದೆ.

Advertisement

ಪುತ್ತೂರು ವಿವೇಕಾನಂದ ಪದವಿ ಕಾಲೇಜಿನ ಅಂತಿಮ ಬಿ.ಎ. ವಿದ್ಯಾರ್ಥಿ, ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಅಜೀರ ನಿವಾಸಿ ಗುರುವಪ್ಪ ಅವರ ಪುತ್ರ ಶ್ರೀಜಿಸ್‌ (20) ಮೃತಪಟ್ಟವರು. ಶ್ರೀಜಿಸ್‌ ಅವರು ರಾಮಕುಂಜದ ಶಾರದಾನಗರದಲ್ಲಿರುವ ತನ್ನ ಚಿಕ್ಕಮ್ಮ ಯಮುನಾ ಕೇಶವ ಗಾಂಧಿಪೇಟೆ ಅವರ ಮನೆಗೆ ಬಂದು ರಾತ್ರಿ ಅಲ್ಲಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ವೇಳೆ ಗೋಳಿತ್ತಡಿ ಸಮೀಪ ಮಿನಿ ಗೂಡ್ಸ್‌ ವಾಹನ ನಡುವೆ ಢಿಕ್ಕಿ ಸಂಭವಿಸಿದೆ.

ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಶ್ರೀಜಿಸ್‌ರನ್ನು ಕೂಡಲೇ ಮಂಗಳೂರಿನ ಎ.ಜೆ.ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು. ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರು ತಂದೆ, ತಾಯಿ ಹಾಗೂ ಇಬ್ಬರು ಸಹೋದರರನ್ನು ಆಗಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next