Advertisement
ರಾಮಕುಂಜದ ಶ್ರೀ ರಾಮಕುಂಜೇಶ್ವರ ಸಂಸ್ಕೃತ ಹಿರಿಯ ಪ್ರಾಥಮಿಕ ಶಾಲೆ ಮತ್ತು ಶ್ರೀ ರಾಮಕುಂಜೇಶ್ವರ ಸಂಸ್ಕೃತ ಪಾಠಶಾಲೆಯ ವಾರ್ಷಿಕೋತ್ಸವ ಸಮಾರಂಭಕ್ಕೆ ಚಾಲನೆ ನೀಡಿ, ಆಶೀರ್ವಚನವಿತ್ತ ಶ್ರೀಗಳು, ವ್ಯಕ್ತಿತ್ವ ನಿರ್ಮಾಣಕ್ಕೆಭಾಷಾ ಮಾಧ್ಯಮವೊಂದೇ ಕಾರಣವಲ್ಲ. ಕನ್ನಡ ಮಾಧ್ಯಮದಲ್ಲಿ ಕಲಿತ ಯು.ಆರ್. ರಾವ್ ಸಹಿತ ಹಲವರು ದೊಡ್ಡ ವಿಜ್ಞಾನಿಗಳಾಗಿದ್ದಾರೆ. ಲೋಕಮಾನ್ಯ ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರ ಹುಟ್ಟೂರು ಹಾಗೂ ಕಲಿತ ಶಾಲೆ ಇದು. ಮುಂದಿನ ವರ್ಷ ಶಾಲೆಯ ಶತಮಾನೋತ್ಸವ ಕಾರ್ಯಕ್ರಮಗಳು ಅರ್ಥಗರ್ಭಿತವಾಗಿ ನಡೆಯಲಿ ಎಂದು ಆಶಿಸಿದರು. ಪೆರಾಬೆಯಿಂದ ನಡೆದುಕೊಂಡೇ ಬಂದು ಇಲ್ಲಿ ಶಿಕ್ಷಣ ಪಡೆದಿರುವುದನ್ನು ಸ್ಮರಿಸಿದ ಸ್ವಾಮೀಜಿ, ಈ ಶಾಲೆಯಲ್ಲಿ ಕಲಿತ ವಿದ್ಯಾಭ್ಯಾಸ ಜೀವನ ಪಾಠ ಕಲಿಸಿದೆ ಎಂದು ಸ್ಮರಿಸಿಕೊಂಡರು.
ಮುತುವರ್ಜಿಯಿಂದ ಶಾಲೆ ರಾಷ್ಟ್ರಮಟ್ಟದಲ್ಲೂ ಹೆಸರು ಮಾಡಿದೆ. ಆಂಧ್ರಪ್ರದೇಶದ ಕರ್ನೂಲ್‌ನಲ್ಲಿರುವ ಹೊಟೇಲ್ ಬೃಂದಾವನದ ಆಡಳಿತ ನಿರ್ದೇಶಕ ಶ್ರೀಧರ ಪಡ್ಡಿಲ್ಲಾಯ ಮಾತನಾಡಿ, ಮಕ್ಕಳು ಮೊಬೈಲ್ ಬಿಟ್ಟು ಪುಸ್ತಕ ಓದಿದಲ್ಲಿ ಭವಿಷ್ಯದಲ್ಲಿ ಹೆಚ್ಚು ಪ್ರಯೋಜನಕ್ಕೆ ಬರಲಿದೆ ಎಂದು ಸಲಹೆ ನೀಡಿದರು. ಬೆಂಗಳೂರಿನ ರಾಯಲ್ ಹೈಸ್ಕೂಲ್ ಮುಖ್ಯ ಶಿಕ್ಷಕಿ ಆಶಾ ಶಂಕರನಾರಾಯಣ, ಉಪ್ಪಿನಂಗಡಿಯಲ್ಲಿ ಡೆಂಟಲ್ ಸರ್ಜನ್ ಆಗಿರುವ ಡಾ| ಸುಪ್ರೀತಾ ರೈ, ಬೆಂಗಳೂರಿನ ಮೇಯರ್ ಅರ್ಗಾನಿಕ್ಸ್‌ನ ಜತ್ತಪ್ಪ ಆರ್. ತಮ್ಮ ಶಾಲಾ ಜೀವನ ನೆನಪಿಸಿಕೊಂಡರು. ಶಂಕರನಾರಾಯಣ ಬೆಂಗಳೂರು, ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೃಷ್ಣಮೂರ್ತಿ ಕಲ್ಲೇರಿ, ಕಾರ್ಯದರ್ಶಿ ರಾಧಾಕೃಷ್ಣ ಕೆ.ಎಸ್., ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲಾ ಕಾರ್ಯದರ್ಶಿ ಕೆ. ಸೇಸಪ್ಪ ರೈ, ಶ್ರೀ ರಾಮಕುಂಜೇಶ್ವರ ಪ.ಪೂ. ಕಾಲೇಜಿನ ಪ್ರಾಂಶುಪಾಲ ಸತೀಶ್ ಭಟ್, ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಸತೀಶ್ ಭಟ್ ಉಪಸ್ಥಿತರಿದ್ದರು.
Related Articles
ಸಾಧಕ ಹಿರಿಯ ವಿದ್ಯಾರ್ಥಿಗಳನ್ನು ಶ್ರೀಗಳು ಶಾಲು ಹೊದೆಸಿ, ಸ್ಮರಣಿಕೆ ನೀಡಿ ಗೌರವಿಸಿದರು. ಕಲಿಕೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ನಾಟಕ ಕಲಾವಿದರು, ಶಾಲೆಯ ಹಳೆ ವಿದ್ಯಾರ್ಥಿಗಳಿಗೆ ಸ್ಮರಣಿಕೆ ನೀಡಲಾಯಿತು.
Advertisement
ಶಿಕ್ಷಕಿ ನಿರ್ಮಲಾ ದೇವಿ ಪ್ರತಿಭಾನ್ವಿತ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು. ಶಾಲಾ ಮುಖ್ಯ ಶಿಕ್ಷಕ ಟಿ. ನಾರಾಯಣ ಭಟ್ ಸ್ವಾಗತಿಸಿ, ವರದಿ ಮಂಡಿಸಿದರು. ಸಂಸ್ಕೃತ ಪಾಠಶಾಲೆಯ ಮುಖ್ಯ ಶಿಕ್ಷಕ ಎಂ.ಜಿ. ಗುಬ್ಬಿ ವಂದಿಸಿದರು. ಸಹಶಿಕ್ಷಕಿ ಸುಶೀಲಾ ನಿರೂಪಿಸಿದರು.