ರಿಷಿ ನಾಯಕರಾಗಿರುವ “ರಾಮನ ಅವತಾರ’ ಚಿತ್ರ ಮೇ 10ರಂದು ತೆರೆಕಾಣುತ್ತಿದೆ. ಇತ್ತೀಚೆಗೆ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ.
ನಟ ರಿಷಿ ಮಾತನಾಡಿ, ಈ ಸಿನಿಮಾ ಒಪ್ಪಿಕೊಳ್ಳಲು ಮುಖ್ಯ ಕಾರಣ ಆಪರೇಷನ್ ಅಲಮೇಲಮ್ಮ. ಈ ಚಿತ್ರಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಆ ರೀತಿ ಎಂಟರ್‌ಟೈನ್ಮೆಂಟ್ ಸಿನಿಮಾ ಮಾಡಿ ಎನ್ನುತ್ತಿದ್ದರು. ಅದೇ ರೀತಿ ಹಾಸ್ಯಭರಿತ ಚಿತ್ರ ಮಾಡಿ ಎನ್ನುತ್ತಿದ್ದರು. ನನಗೆ ಆಪರೇಷನ್ ಅಲಮೇಲಮ್ಮ ಮ್ಯಾಜಿಕ್. ಅದನ್ನು ರಿಪೀಟ್ ಮಾಡುವ ಆಗಿಲ್ಲ. ನೋಡೋಣಾ ಅದು ಸರಳ ಜಾನರ್ ಅಲ್ಲ. ಆ ಸಮಯದಲ್ಲಿ ಪಂಪಾಪತಿ ಸಿಕ್ಕಿದ್ದರು. ಅವರ ಹಾಸ್ಯ ನನಗೆ ಇಷ್ಟವಾಯ್ತು. ರಾಮಾಯಣ ಇಟ್ಟುಕೊಂಡು ಸಿನಿಮಾ ಮಾಡುವ ಕಥೆ ತಂದರು. 2024 ರಲ್ಲಿ ನಡೆಯುವ ಘಟನೆಗೆ ರಾಮಾಯಣ ಮೌಲ್ಯವನ್ನು ತೋರಿಸುವುದು. ಈ ಚಿತ್ರದಲ್ಲಿ ತೋರಿಸುತ್ತಿರುವುದು ನನಗೆ ಖುಷಿ ಕೊಟ್ಟಿದೆ. ಇದು ಖುಷಿ ಕೊಡುವ ಸಿನಿಮಾ. ಪ್ರತಿಯೊಬ್ಬರು ತಮ್ಮ ಪಾತ್ರಗಳಿಗೆ ಅದ್ಭುತವಾಗಿ ಜೀವ ತುಂಬಿದ್ದಾರೆ’ ಎಂದರು.
ನಿರ್ದೇಶಕ ವಿಕಾಸ್ ಪಂಪಾಪತಿ ಮಾತನಾಡಿ, “ರಾಮ ಪಾತ್ರಧಾರಿ ಅವನಿಗೆ ಅವನೇ ಜೆಂಟಲ್ ಮ್ಯಾನ್ ಎಂದು ಹೇಳಿಕೊಂಡು ಓಡಾಡುತ್ತಾ ಇರುತ್ತಾನೆ. ಅವನು ಹೇಗೆ ಜೆಂಟಲ್ ಮ್ಯಾನ್ ಆಗುತ್ತಾನೆ? ಅವನ ಜೀವನದಲ್ಲಿ ನಡೆದ ಘಟನೆಗಳೇನು ಅವನನ್ನು ಹೇಗೆ ಬದಲಾಯಿಸುತ್ತದೆ? ರಾಮನ ಅವತಾರ ಎಂದು ಯಾಕೆ ಇಟ್ಟಿದ್ದೇವೆ ಎಂದರೆ? ರಾಮನ ಹೇಗೆ ಜೆಂಟಲ್ ಮ್ಯಾನ್ ಆಗುತ್ತಾನೆ ಅನ್ನುವುದನ್ನು ಎಂಟರ್ ಟೈನ್ಮೆಂಟ್ ಆಗಿ ಹೇಳಿದ್ದೇವೆ. ರಾಮನ ಅವತಾರ ಎಂದು ಹೇಗೆ ಹೆಸರಟ್ಟಿದ್ದೇವೆ ಎಂದರೆ ಎಲ್ಲರ ಲೈಫ್ ನಲ್ಲಿಯೂ ಒಂದಲ್ಲ ಒಂದು ರಾಮಾಯಣ ನಡೆಯುತ್ತದೆ. ಸೀತೆ ತರ ಹೆಂಡತಿ, ಲಕ್ಷ್ಮಣ ರೀತಿ ತಮ್ಮ, ರಾವಣನಿಂದ ಆಗುವ ಸಮಸ್ಯೆ? ಈ ರೀತಿ ಸಮಸ್ಯೆಗಳು ಎಲ್ಲರ ಜೀವನದಲ್ಲಿ ನಡೆಯುತ್ತವೆ. ಆ ಘಟನೆಗಳನ್ನು ಚಿತ್ರದಲ್ಲಿ ತೋರಿಸಲಾಗಿದೆ’ಎಂದರು
“ರಾಮನ ಅವತಾರ’ ಸಿನಿಮಾದಲ್ಲಿ ಪ್ರಣೀತಾ ಸುಭಾಷ್ ಹಾಗೂ ಶುಭ್ರ ಅಯ್ಯಪ್ಪ ನಾಯಕಿಯರಾಗಿ ನಟಿಸಿದ್ದಾರೆ.
ನಟಿ ಪ್ರಣೀತಾ ಸುಭಾಷ್ ಮಾತನಾಡಿ, ರಾಮನ ಅವತಾರ ತುಂಬಾ ವಿಶೇಷವಾದ ಸಿನಿಮಾ. ರಾಮಾಯಣ ಎಲ್ಲರಿಗೂ ಗೊತ್ತಿದೆ. ಈ ರಾಮಾಯಣ ಮಾಡರ್ನ್ ಟೇಕ್. ನಾನು ಈ ರೀತಿ ಪ್ರಾಜೆಕ್ಟ್ ಭಾಗವಾಗಿದ್ದು, ಖುಷಿ ಕೊಟ್ಟಿದೆ. ರಾಮಾಯಣ ಬಗ್ಗೆ ಅಂದ ತಕ್ಷಣ ಸಿನಿಮಾ ಒಪ್ಪಿಕೊಂಡೆ.
ರಿಷಿ ಬೇರೆ ಅವರ ಚಿತ್ರಗಳನ್ನು ನೋಡಿದ್ದೇನೆ. ಶೂಟಿಂಗ್‌ಜರ್ನಿ ತುಂಬಾ ಚೆನ್ನಾಗಿತ್ತು ಎಂದು ಹೇಳಿದರು. ನಟಿ ಶುಭ್ರ ಅಯ್ಯಪ್ಪ ಪಾತ್ರದ ಬಗ್ಗೆ ಮಾತನಾಡಿದರು.