Advertisement

Ramanagar: ಜೆಡಿಎಸ್‌ ಕೊನೆಗಾಣುವ ಎಲ್ಲಾ ಲಕ್ಷಣ ಕಾಣಿಸುತ್ತಿದೆ: ಡಿ ಕೆ ಸುರೇಶ್

05:22 PM Sep 30, 2023 | Team Udayavani |

ರಾಮನಗರ: ಜೆಡಿಎಸ್‌ ಕೊನೆಗಾಣುವ ಎಲ್ಲಾ ಲಕ್ಷಣ ಕೂಡ ಕಾಣಿಸುತ್ತಿದೆ. ಜೆಡಿಎಸ್ ಪಕ್ಷದ ಹಲವು ಮುಖಂಡರು, ನಾಯಕರು ಪ್ರಾಮಾಣಿಕತೆಯಿಂದ ಕೆಲಸ ಮಾಡಿದರೂ ಅವರಿಗೆ ಬೆಲೆ ಇಲ್ಲವೆಂದು ನಮ್ಮ ಪಕ್ಷ ಸೇರುತ್ತಿದ್ದಾರೆ ಎಂದು ಸಂಸದ ಡಿ.ಕೆ ಸುರೇಶ್ ಹೇಳಿದರು.

Advertisement

ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಮಾಜಿ ಶಾಸಕ ಎಂ.ಸಿ ಅಶ್ವಥ್ 30 ವರ್ಷ ರಾಜಕಾರಣ ಮಾಡಿಕೊಂಡು ಬಂದಿದ್ದಾರೆ. ಮೊದಲಿಂದಲೂ ಡಿ.ಕೆ. ಶಿವಕುಮಾರ್ ಜೊತೆ ವಿಶೇಷ ಸ್ನೇಹ ಸಂಬಂಧ ಇಟ್ಟುಕೊಂಡಿದ್ದರು. ರಾಜಕೀಯ ಧ್ರುವೀಕರಣ ಸಂದರ್ಭದಲ್ಲಿ ಹಲವು ಪ್ರಮುಖ ನಾಯಕರು ನಮ್ಮ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ. ಕಳೆದ ವಾರ ಹಿರಿಯರ ಜೊತೆ ಸಭೆ ನಡೆಸಿ ಮಾತನಾಡಿದ್ದೆ. ಅಂದು ನಮ್ಮ ಪಕ್ಷಕ್ಕೆ ಬನ್ನಿ ಎಂದು ಅಹ್ವಾನ ಮಾಡಿದ್ದೆ. ಪಕ್ಷಕ್ಕೆ ಬರಲು ಒಪ್ಪಿದ್ದಾರೆ. ಗಾಂಧಿ ಜಯಂತಿ ದಿನ ಮಾಜಿ ಶಾಸಕ ಅಶ್ವಥ್ ನಾಯಕತ್ವದಲ್ಲಿ ಜೆಡಿಎಸ್‌ ಪಕ್ಷ ಹಲವು ನಾಯಕರು ಕಾಂಗ್ರೆಸ್ ಸೇರಲಿದ್ದಾರೆ ಎಂದರು.

ವಿಧಾನಸಭೆ ಚುನಾವಣೆಗೂ ಮೊದಲೇ ಅಹ್ವಾನ ಕೊಟ್ಟಿದ್ದೆ. ಆ ವೇಳೆ ಜೆಡಿಎಸ್ ಪಕ್ಷ ಬಿಡುವ ಮಾತಿಲ್ಲ ಎಂದಿದ್ದರು. ಆದರೆ ಬದಲಾದ ರಾಜಕಾರಣ ಸಂದರ್ಭದಲ್ಲಿ ಸಹಮತಿ‌ಕೊಟ್ಟು ಪಕ್ಷಕ್ಕೆ ಬರುತ್ತಿದ್ದಾರೆ. ಇಲ್ಲಿ ಲಾಭ ನಷ್ಟದ ಪ್ರಶ್ನೆ ಇಲ್ಲ. ಜೆಡಿಎಸ್ ‌ನಲ್ಲಿ ಸ್ಥಾನಮಾನ ಸಿಗುವುದು ಕಷ್ಟ ಎಂದು ಕಾಂಗ್ರೆಸ್ ಸೇರುತ್ತಿದ್ದಾರೆ ಎಂದರು.

ಅಲ್ಪಸಂಖ್ಯಾತರ ಬಗ್ಗೆ ಮಾಜಿ ಸಿಎಂ ಎಚ್‌ಡಿಕೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ಮತದಾರರು ತೀರ್ಪು ನೀಡಿದ್ದಾರೆ. ಅವರ ಮೈತ್ರಿ ಪವಿತ್ರವೋ ಅಪವಿತ್ರವೋ ಎಂಬುದನ್ನು ಜನರು ತಿರ್ಮಾನ ಮಾಡುತ್ತಾರೆ. ಚನ್ನಪಟ್ಟಣದಲ್ಲಿ ಯೋಗೇಶ್ವರ್ ವಿರುದ್ಧ ಹೋರಾಟ ಮಾಡಿಕೊಂಡು ಬಂದಿದ್ದಾರೆ. ಅವರ ಮೇಲೆ‌ ಕೇಸ್‌ಗಳಿವೆ. ಎಲ್ಲಾ ಸಾಕ್ಷಿಗಳು ಮಾಧ್ಯಮದಲ್ಲಿ ಪ್ರಸಾರಗೊಂಡಿದೆ. ಹೀಗಾಗಿ ನಮ್ಮ ಪಕ್ಷಕ್ಕೆ ಬಂದವರಿಗೆ ಅಹ್ವಾನ ನೀಡುತ್ತಿದ್ದೇವೆ ಎಂದು ಡಿ.ಕೆ. ಸುರೇಶ್ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next