Advertisement

Ramanagar: ಡಿವೈಡರ್‌ ಗೆ ಬೈಕ್ ಡಿಕ್ಕಿ, ಇಬ್ಬರಿಗೆ ಗಂಭೀರ ಗಾಯ

01:36 PM Sep 28, 2023 | Team Udayavani |

ರಾಮನಗರ: ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ ಹೊಡೆದು ಇಬ್ಬರು ಸವಾರರು ಗಂಭೀರ ಗಾಯಗೊಂಡ ಘಟನೆ ರಾಮನಗರ ತಾಲೂಕಿನ ಬಸವನಪುರ ಗ್ರಾಮದ ಬಳಿ ಗುರುವಾರ ನಡೆದಿದೆ.

Advertisement

ಅಬುತಾಲಿಮ್ (30 ವ), ಸಾವುದ್ (27 ವ) ಅಪಘಾತದಲ್ಲಿ ಗಾಯಗೊಂಡವರು. ಈ ಯುವಕರು ಈದ್ ಮಿಲಾದ್ ಆಚರಣೆಗೆ ಬೆಂಗಳೂರಿನ ಶಿವಾಜಿ ನಗರದಿಂದ ಮೈಸೂರಿಗೆ ತೆರಳುತ್ತಿದ್ದರು.

ಬೈಕ್ ಸ್ಪೀಡ್ ನಿಯಂತ್ರಣಕ್ಕೆ ಸಿಗದೆ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಗಾಯಗೊಂಡ ಯುವಕರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ:Loksabha; ಧಾರವಾಡ ಕ್ಷೇತ್ರದಿಂದ ಸ್ಪರ್ಧೆ ಸಿದ್ದತೆಗೆ ಡಿಕೆಶಿಯಿಂದ ಸೂಚನೆ: ಮೋಹನ ಲಿಂಬೆಕಾಯಿ

ಸ್ಥಳಕ್ಕೆ ಅಪರ ಜಿಲ್ಲಾ ಪೊಲೀಸ್ ಅಧಿಕಾರಿ ಸುರೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement

ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next