Advertisement

Ramanagara: ಹಾಲಿನ ಲಾರಿಗೆ ಡಿಕ್ಕಿ ಹೊಡೆದ ಕಾರು; ಐವರಿಗೆ ಗಂಭೀರ ಗಾಯ

12:35 PM Aug 10, 2023 | Team Udayavani |

ರಾಮನಗರ: ಹಾಲಿನ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಐವರು ಗಂಭೀರ ಗಾಯಗೊಂಡ ಘಟನೆ ಚನ್ನಪಟ್ಟಣ ತಾಲೂಕಿನ ತಿಟ್ಟಮಾರನಹಳ್ಳಿ ಗ್ರಾಮದ ಬಳಿ ನಡೆದಿದೆ.

Advertisement

ಡಿಕ್ಕಿ ಹೊಡೆದ ರಭಸಕ್ಕೆ ಕಾರು ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ರಸ್ತೆಗೆ ಬಿದ್ದಿದೆ. ಕಾರಿನಲ್ಲಿದ್ದ ಐವರಿಗೆ ಗಂಭೀರ ಗಾಯವಾಗಿದೆ.

ಕಾರಿನಲ್ಲಿದ್ದವರು ಬೆಂಗಳೂರಿನಿಂದ ಶ್ರೀರಂಗಪಟ್ಟಣಕ್ಕೆ ತೆರಳುವಾಗ ಈ ದುರ್ಘಟನೆ ನಡೆದಿದೆ.

ಸ್ಥಳಕ್ಕೆ ಭೇಟಿ ನೀಡಿದ ಚನ್ನಪಟ್ಟಣ ಪೊಲೀಸರು ಗಾಯಗೊಂಡವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

Advertisement

ಚನ್ನಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next