Advertisement

Ramanagara: ಬೈಕ್‌ ಗೆ ಲಾರಿ ಡಿಕ್ಕಿ; ಬೈಕ್‌ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

11:07 AM Sep 06, 2024 | Team Udayavani |

ರಾಮನಗರ: ಬೆಳ್ಳಂಬೆಳಿಗ್ಗೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೆಯ ಸರ್ವೀಸ್ ರಸ್ತೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ ಘಟನೆ ಶುಕ್ರವಾರ (ಸೆ.06) ನಡೆದಿದೆ. ರಾಮನಗರ ತಾಲೂಕಿನ ಮಾಯಗಾನಹಳ್ಳಿ ಬಳಿ ಘಟನೆ ನಡೆದಿದೆ.

Advertisement

ಲಾರಿಗೆ ಬೈಕ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದರೆ, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಗುರುಮೂರ್ತಿ (39), ಶೇಕ್ ಅಫೀಸ್ (45), ವೆಂಕಟೇಶ್ (50) ಎಂದು ಗುರುತಿಸಲಾಗಿದೆ. ಮೃತರೆಲ್ಲರೂ ಗಾರೆ ಕೆಲಸದವರು ಎನ್ನಲಾಗಿದೆ. ಗಾಯಾಳು ಹನುಮಂತಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೆಯ ಸರ್ವೀಸ್ ರಸ್ತೆಯಲ್ಲಿ ಅಪಘಾತ ನಡೆದಿದೆ. ಈ ನಾಲ್ವರು ಗಾರೆ ಕೆಲಸಕ್ಕೆಂದು ಒಂದೇ ಬೈಕ್‌ ನಲ್ಲೊ ರಾಮನಗರದಿಂದ ಬಿಡದಿ ಕಡೆಗೆ ಹೋಗುತ್ತಿದ್ದರು. ಈ ವೇಳೆ ಲಾರಿ ಅಡ್ಡ ಬಂದು ಬೈಕ್ ಡಿಕ್ಕಿಯಾಗಿದೆ. ಪರಿಣಾಮ ಮೂವರು ಸ್ಥಳದಲ್ಲೇ ಸಾವು ಕಂಡಿದ್ದಾರೆ. ಓರ್ವ ಯುವಕನಿಗೆ ಗಂಭೀರ ಗಾಯವಾಗಿದೆ.

ಸ್ಥಳಕ್ಕೆ ಎಎಸ್ಪಿ ಸುರೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  ರಾಮನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next