ರಾಮನಗರ: ರೇಷ್ಮೆ ನಗರಕ್ಕೆ ಕೋವಿಡ್ ಕಾಲಿಟ್ಟಿದೆ ಅದರಂತೆ ಈ ಜಿಲ್ಲೆಯಲ್ಲಿ ಎರಡು ಹೊಸ ಪ್ರಕರಣಗಳು ಪತ್ತೆಯಾಗಿರುವುದಾಗಿ ಡಿಎಚ್‌ಒ ನಿರಂಜನ್ ಮಾಹಿತಿ ನೀಡಿದ್ದಾರೆ.
ಜಿಲ್ಲೆಯಲ್ಲಿ ನಿನ್ನೆಯಿಂದ ಎರಡು ಕೋವಿಡ್ ಪ್ರಕರಣ ದಾಖಲಾಗಿದ್ದು. ರಾಮನಗರದ ಬಿಡದಿ ಹೋಬಳಿಯ ಬೈರಮಂಗಲ ಗ್ರಾಮದ ಇಬ್ಬರಲ್ಲಿ ಕೋವಿಡ್ ಪತ್ತೆಯಾಗಿರುವುದಾಗಿ ಮಾಹಿತಿ ನೀಡಿದ್ದಾರೆ.
ಅದರಂತೆ ಓರ್ವ ಇಂಜಿನಿಯರಿಂಗ್ ವಿದ್ಯಾರ್ಥಿ ಹಾಗೂ ಮಹಿಳೆಯಲ್ಲಿ ಕೋವಿಡ್ ಪತ್ತೆಯಾಗಿದೆ.
ಇಬ್ಬರಿಗೂ ಜ್ವರ ಕಾಣಿಸಿಕೊಂಡ ಹಿನ್ನೆಲೆ ಕೋವಿಡ್ ಪರೀಕ್ಷೆ ಮಾಡಿದ ವೇಳೆ ವರದಿಯಲ್ಲಿ ಕೋವಿಡ್ ಪಾಸಿಟಿವ್ ವರದಿಯಾಗಿದೆ. ಇಬ್ಬರಲ್ಲೂ ಯಾವುದೇ ಟ್ರಾವೆಲ್ ಇಷ್ಟರಿ ಇಲ್ಲ.
ಸದ್ಯ ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರೋ ರೋಗಿಗಳು.
ಕೋವಿಡ್ ದೃಢಪಟ್ಟ ನಿಟ್ಟಿನಲ್ಲಿ ಜಿಲ್ಲೆಯ ನಾಲ್ಕು ತಾಲೂಕಿನಲ್ಲೂ ಕಟ್ಟುನಿಟ್ಟಿನ ಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಜಿಲ್ಲಾಡಳಿತದ ಸೂಚನೆಯಂತೆ ಜಿಲ್ಲೆಯ ನಾಲ್ಕು ತಾಲೂಕುಗಳಿಗೂ ಡಿಎಚ್‌ಒ ನಿರಂಜನ್ ಭೇಟಿ ನೀಡಿ ವೈದ್ಯರಿಗೆ ಸೂಚನೆ ನೀಡುತ್ತಿದ್ದಾರೆ.
ಇದನ್ನೂ ಓದಿ: WHO: ಭಯ ಪಡಬೇಡಿ! ಕೋವಿಡ್ ಹೊಸ ರೂಪಾಂತರಿ JN.1 ಕುರಿತು ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದೇನು?